ಕೋಳಿ ಸಮಾಜವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ – ಜಮಾದಾರ

Must Read

ಬೀದರ: ರಾಜ್ಯದಲ್ಲಿ ಕೋಳಿ ಸಮಾಜದ ಐವತ್ತರಿಂದ ಅರವತ್ತು ಲಕ್ಷ ಜನರು ಇದ್ದು ಪ್ರತಿಯೊಂದು ರಾಜಕೀಯ ಪಕ್ಷಗಳೂ ನಮ್ಮ ಕೋಳಿ ಸಮಾಜಕ್ಕೆ ಅನ್ಯಾಯ ಮಾಡುತ್ತಾ ಬಂದಿವೆ ಎಂದು ಕೋಳಿ ಸಮಾಜ ಮುಖಂಡ ಜಗನ್ನಾಥ ಜಮಾದಾರ ಆರೋಪಿಸಿದರು.

ಬೀದರನಲ್ಲಿ ಮಾತನಾಡಿದ ಅವರು, ನಾನೊಬ್ಬ ಬಿಜೆಪಿ ದಕ್ಷಿಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು ನನಗೆ ಟಿಕೆಟ್ ಕೊಟ್ಟರೆ ಗೆಲುವು ಖಚಿತ ಎಂದರಲ್ಲದೆ ಕೋಳಿ ಸಮಾಜಕ್ಕೂ ಪ್ರಾಶಸ್ತ್ಯ ಕೊಟ್ಟಂತಾಗುತ್ತದೆ ಎಂದರು.

ಗಡಿ ಬೀದರ್ ಜಿಲ್ಲೆ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿ ಸಮಾಜದವರಿದ್ದರೂ ರಾಜಕೀಯವಾಗಿ ನಮ್ಮ ಸಮಾಜವನ್ನು ಬಳಸಿಕೊಳ್ಳಲಾಗುತ್ತಿದೆ ಆದರೆ ರಾಜಕೀಯದಲ್ಲಿ ಪ್ರಾಮುಖ್ಯತೆ ನೀಡುತ್ತಿಲ್ಲ.

ಇದರಿಂದ ನಮ್ಮ ಸಮಾಜ ಹಿಂದುಳಿಯುತ್ತಿದೆ. ಬೀದರ ದಕ್ಷಿಣ ಕ್ಷೇತ್ರದಿಂದ ನಾನೂ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದೇನೆ ನನಗೆ ಟಿಕೆಟ್ ಕೊಟ್ಟಲ್ಲಿ ಗೆದ್ದು ಬರುವುದು ಖಚಿತ ಎಂದು ಜಮಾದಾರ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group