- Advertisement -
ಬೀದರ – ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಹೋಳಸಮುದ್ರ ಗ್ರಾಮಕ್ಕೆ ಭೇಟಿ ನೀಡಿ, ಅಖಂಡ ಹರಿನಾಮ ಸಪ್ತಾಹದಲ್ಲಿ ಪಾಲ್ಗೊಂಡು ಡ್ಯಾನ್ಸ್ ಮಾಡಿದರು.
ನಮ್ಮ ಭವ್ಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ. ಜನತೆ ಇಂದಿಗೂ ಭಕ್ತಿಯಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ವಿಷಯ ಎಂದು ಅವರು ಹೇಳಿದರು.
- Advertisement -
ಕೀರ್ತನಕಾರರಾದ ಏಕನಾಥ ಮಹಾರಾಜ ಅವರೊಂದಿಗೆ ಸಚಿವ ಪ್ರಭು ಚವ್ಹಾಣ ಅವರು ಭಜನೆಗೆ ಭಕ್ತಿಪೂರ್ವಕವಾಗಿ ಕೆಲಹೊತ್ತು ಹೆಜ್ಜೆ ಹಾಕಿ ಡ್ಯಾನ್ಸ್ ಮಾಡಿ ಗಮನ ಸೆಳೆದರು.