spot_img
spot_img

ವಿದ್ಯಾರ್ಥಿಗಳ ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ – ಬಿ.ಎನ್.ಬ್ಯಾಳಿ

Must Read

spot_img

ಸವದತ್ತಿ – ಶಿಕ್ಷಣ ಕ್ಷೇತ್ರದಲ್ಲಿ  ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ.ಕೊರೊನಾದಿಂದ ಸ್ಥಗಿತಗೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮತ್ತೆ ಪ್ರಾರಂಭವಾಗಿವುದು ಮಕ್ಕಳಿಗೆ ಸಂತಸ ತಂದಿದೆ.ನಿರ್ಣಾಯಕರು ಮಕ್ಕಳಲ್ಲಿನ ಸೂಕ್ತ ಪ್ರತಿಭೆ ಗುರುತಿಸಿ ನಿರ್ಣಯ ಕೈಗೊಳ್ಳುವ ಮೂಲಕ ಇಲ್ಲಿ ಆಯ್ಕೆಯಾಗುವ ಮಕ್ಕಳು ರಾಜ್ಯ ಮಟ್ಟದವರೆಗೂ ತಮ್ಮ ಪ್ರತಿಭೆ ಪ್ರದರ್ಶಿಸುವಂತಾಗಲಿ ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ.ಎನ್.ಬ್ಯಾಳಿ ಕರೆ ನೀಡಿದರು.

ಅವರು ಪಟ್ಟಣದ ಎಸ್.ಕೆ.ಪ್ರೌಢ ಶಾಲೆಯಲ್ಲಿ ಜಿ.ಪಂ.ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ  ಪ್ರಾಥಮಿಕ ಶಾಲೆಗಳ ಸವದತ್ತಿ ಉತ್ತರ.,ದಕ್ಷಿಣ,ಇನಾಂಹೊಂಗಲ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎಚ್,ಆರ್.ಪೆಟ್ಲೂರ ಮಾತನಾಡಿ “ ಪ್ರತಿಯೊಂದು ಮಗುವಿನಲ್ಲಿಯೂ ಒಂದು ಪ್ರತಿಭೆ ಅಡಗಿರುತ್ತದೆ. ಪ್ರತಿಭೆಗೆ ಬೆಲೆ ಕಟ್ಟಲಾಗದು. ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು ಇದನ್ನು ಸದುಪಯೋಗ ಮಾಡಿಕೊಂಡು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುವಂತೆ “ ಕರೆ ನೀಡಿದರು

ಮುಖ್ಯ ಅತಿಥಿಗಳಾಗಿ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಜಿ.ಎಂ.ಕರಾಳೆ. ಎಸ್.ಕೆ.ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಸ್.ಪಾಟೀಲ. .ಬಿ.ಬಿ.ಮಮದಾಪೂರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ಬಿ.ವ್ಹಿ.ಚಿತಕಂಡಿ.ಬಿ.ಐ.ಇ ಆರ್.ಟಿ ವೈ.ಬಿ.ಕಡಕೋಳ. ಕ್ಷೇತ್ರ ಸಂಪನ್ಮೂಲ ವ್ಯಕ್ತಿ  ವ್ಹಿ.ಸಿ.ಹಿರೇಮಠ..ಪರಸಗಡ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ನಿರ್ದೇಶಕರಾದ ಜಯಶ್ರೀ ಕಾತ್ರಾಳ.ಸವದತ್ತಿ ಉತ್ತರ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ರವಿ ನಲವಡೆ.ಇನಾಂಹೊಂಗಲ ಸಮೂಹ ಸಂಪನ್ಮೂಲ ಕೇಂದ್ರದ ಸಿ.ಆರ್.ಪಿ.ಯವರಾದ ಎಂ.ಎಸ್.ಗಡೇಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ವೀರೇಶ.ಚಂದರಗಿ.ಸವದತ್ತಿ ದಕ್ಷಿಣ ಸಿ.ಆರ್.ಪಿಗಳಾದ ಎಫ್.ಜಿ.ನವಲಗುಂದ.ಸವದತ್ತಿ ಉತ್ತರ ಮತ್ತು ದಕ್ಷಿಣ ಹಾಗೂ ಇನಾಂಹೊಂಗಲ ವಲಯಗಳ ಮುಖ್ಯೋಪಾಧ್ಯಾಯರುಗಳು  ಶಿಕ್ಷಕ ಶಿಕ್ಷಕಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಂದ ಪರಮೇಶ್ವರ ವೇಷಭೂಷಣ ಹಾಗೂ ಗಣನಾಯಕನ ನೃತ್ಯ ಪ್ರದರ್ಶನ ಜರುಗಿತು. ರವಿ ನಲವಡೆ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಫ್.ಜಿ.ನವಲಗುಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಸ್.ಗಡೇಕಾರ ವಂದಿಸಿದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!