spot_img
spot_img

ಸಿಂದಗಿ ಕಸಾಪ ಪದಾಧಿಕಾರಿಗಳ ಪದಗ್ರಹಣ ಪೂರ್ವಭಾವಿ ಸಭೆ

Must Read

ಸಿಂದಗಿ– ಸಾಹಿತ್ಯ ಲೋಕಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯವಾಗಿದೆ. ಕನ್ನಡ ನಾಡು ಅಪರೂಪದ ನಾಡು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.

ಪಟ್ಟಣದ ಡಾ. ಅಂಬೇಡ್ಕರ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.

ತಾಲೂಕಾ ಘಟಕ ರಚನೆಯಾಗಿ ಅನೇಕ ದಿನಗಳಾಯಿತು ಕಾರಣಾಂತರಗಳಿಂದ ಪದಗ್ರಹಣ ಕಾರ್ಯಕ್ರಮಕ್ಕೆ ಹಿನ್ನಡೆಯಾಗಿದೆ ಇನ್ನೂ ಕೆಲವೆ ದಿನಗಳಲ್ಲಿ ಪಟ್ಟಣದಲ್ಲಿ ಪದಗ್ರಹಣ ಕಾರ್ಯಕ್ರಮದ ಅರ್ಥಪೂರ್ಣವಾಗಿ ಆಯೋಜಿಸಲು ತಿರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಅನೇಕ ಸರ್ವಧರ್ಮದ ಸಂತರು, ಸಾಹಿತಿಗಳು, ಶಿಕ್ಷಕರು ಸೇರಿದಂತೆ ಎಲ್ಲ ಕನ್ನಡ ಮನಸ್ಸುಗಳುಳ್ಳವರನ್ನು ಆಹ್ವಾನಿಸಲಾಗುವುದು ತಾವೆಲ್ಲರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿಕೊಂಡರು.

ಅಧ್ಯಕ್ಷತೆ ವಹಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ ಮಾತನಾಡಿ, ಬಹಳಷ್ಟು ಜನ ಪ್ರಾಥಮಿಕ ಶಾಲಾ ಶಿಕ್ಷಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿದ್ದಾರೆ ಆ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಎಲ್ಲ ರೀತಿಯಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಶರಣಪ್ಪ ವಾರದ, ಗೊಲ್ಲಾಳಪ್ಪಗೌಡ ಪಾಟೀಲ ಮಾಗಣಗೇರಿ, ರವಿ ಗೋಲಾ, ಎಮ್.ಎ.ಖತೀಬ, ಅಶೋಕ ಗಾಯಕವಾಡ, ಸುನಂದಾ ಯಂಪೂರೆ, ಆನಂದ ಶಾಬಾದಿ, ಮೈಬೂಬ ಸಿಂದಗಿಕರ, ಚಂದ್ರಶೇಖರ ದೇವರೆಡ್ಡಿ, ತಮ್ಮಣ್ಣ ಈಳಗೇರ ಮಾತನಾಡಿದರು.

ಈ ಸಂದರ್ಭದಲ್ಲಿ ಹಾಸೀಂ ಆಳಂದ, ಪ್ರಕಾಶ ಗುಣಾರಿ, ಸಿದ್ದಲಿಂಗ ಕಿಣಗಿ, ಶಾಂತು ರಾಣಾಗೋಳ, ಸಾಯಬಣ್ಣ ದೇವರಮನಿ, ಶಾರದಾ ಬೆಟಗೇರಿ, ಸಿದ್ದಣ್ಣ ಹದನೂರ, ಅನಸೂಯಾ ಪರಗೊಂಡ, ನೀಲಮ್ಮ ಯಡ್ರಾಮಿ, ಸೇರಿದಂತೆ ಅನೇಕರು ಇದ್ದರು.

- Advertisement -
- Advertisement -

Latest News

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿಂದಗಿ: ಪಟ್ಟಣದ ಭೀಮಾಶಂಕರ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಮಾಡಲಾಯಿತು. ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕೊಗಟನೂರ ಪೂಜ್ಯಶ್ರೀ...
- Advertisement -

More Articles Like This

- Advertisement -
close
error: Content is protected !!