ಪೂರ್ವ ವೈದ್ಯಕೀಯ ಮೆಗಾ ತಪಾಸಣ ಶಿಬಿರ

Must Read

ಸಮಾಜ ಸೇವೆಯತ್ತ ಡೆಲ್ಲಿ ಪಬ್ಲಿಕ್ ಶಾಲೆ ಉತ್ತರದ ಮತ್ತೊಂದು ಹೆಜ್ಜೆ

ಬೆಂಗಳೂರು –  ದಿನಾಂಕ 29-11-2025 ರಂದು ಡೆಲ್ಲಿ ಪಬ್ಲಿಕ್ ಶಾಲೆ ಬೆಂಗಳೂರು ಉತ್ತರದ ಆಡಳಿತ ಮಂಡಳಿ, ಪ್ರಾಂಶುಪಾಲರು,ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳಿಂದ ಹಾಗೂ ಶಾಲೆಯ ವೈದ್ಯಕೀಯ ತಂಡದ ನೇತೃತ್ವದಲ್ಲಿ ರಜಾಕ್ ಪಾಳ್ಯದಲ್ಲಿ ಭವ್ಯವಾದ ಪೂರ್ವ ವೈದ್ಯಕೀಯ ತಪಾಸಣ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ಆರೋಗ್ಯ ಶಿಬಿರಕ್ಕೆ ಮುಖ್ಯ ಅತಿಥಿಗಳಾಗಿ ಉಸ್ಮಾನ್ ಅಲಿರವರು, ಪ್ರಾಂಶುಪಾಲರಾದ ಶ್ರೀಮತಿ ಮಂಜು ಬಾಲಸುಬ್ರಹ್ಮಣ್ಯಂರವರು, ಉಪ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಕಂಡರಾಜಿ ಅವರು ಹಾಜರಿದ್ದರು.

ಇದೆ ಸಂದರ್ಭದಲ್ಲಿ ಸುರಕ್ಷ ಗ್ರೂಪ್ ಆಫ್ ಆಸ್ಪತ್ರೆಗಳು , ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಬ್ಯಾಪ್ಟಿಸ್ಟ್ ಆಸ್ಪತ್ರೆ, ಎಮ್.ಎಸ್. ರಾಮಯ್ಯ ಆಸ್ಪತ್ರೆ, ಎಫ್.ಬಿ. ಆಕ್ಯುಪಂಕ್ಚರ್ ಆಸ್ಪತ್ರೆ ಹಾಗೂ ಎನ್ಐಪಿಸಿಸಿಡಿ ಆಸ್ಪತ್ರೆಗಳ ವೈದ್ಯಕೀಯ ತಂಡಗಳು ಸಾರ್ವಜನಿಕರ ಆರೋಗ್ಯ ತಪಾಸಣೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಎನ್ ಸಿ ಸಿ ತಂಡ ಹಾಗೂ ನಮ್ಮ ಓಬಿಇ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ವೈದ್ಯ ತಂಡಕ್ಕೆ ಸಹಾಯಕರಾಗಿ ಸೇವೆ ಸಲ್ಲಿಸಿದರು. ರಜಾಕ್ ಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ನೂರಾರು ಜನರು ಈ ಉಚಿತ ವೈದ್ಯಕೀಯ ಸೇವೆಯ ಪ್ರಯೋಜನವನ್ನು ಪಡೆದುಕೊಂಡರು. ಇದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಚಾರವಾಗಿ ಅವರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಶಿಬಿರದ ಅಂಗವಾಗಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿತ್ತು. ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಅರಿತ ಅನೇಕ ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಸತ್ಸೇವೆಗೆ ಕೈಜೋಡಿಸಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳು ‘ಸ್ವಚ್ಛ ಊರು – ಆರೋಗ್ಯಕರ ಜೀವನ’ ಎಂಬ ವಿಷಯದಡಿಯಲ್ಲಿ ಅನೇಕ ಘೋಷ ವಾಕ್ಯಗಳನ್ನು ಹೊತ್ತ ಫಲಕಗಳ ಜೊತೆ ಜಾಗೃತಿಯ ಸಂದೇಶವನ್ನು ಒಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಿದ್ದು, ಇದು ಜನರಲ್ಲಿ ಅಪಾರ ಪ್ರಶಂಸೆಗೆ ಪಾತ್ರವಾಯಿತು.

ಈ ಮಹತ್ವದ ಸೇವಾ ಕಾರ್ಯಕ್ರಮದ ಮೂಲಕ ಆರೋಗ್ಯ ಜಾಗೃತಿ ಹಾಗೂ ಸೇವಾಭಾವನೆಗೆ ಶಾಲೆ ಮತ್ತೊಂದು ಮಾದರಿಯನ್ನು ಸ್ಥಾಪಿಸಿದೆ.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group