ಸವದತ್ತಿ: ಪಟ್ಟಣದ ಗುರುಭವನದಲ್ಲಿ ಸವದತ್ತಿ ಹಾಗೂ ಮುನವಳ್ಳಿ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪ್ರಧಾನ ಗುರುಗಳಿಗೆ ಶಾಲಾ ಪ್ರಾರಂಭೋತ್ಸವ ಕುರಿತು ಪೂರ್ವಭಾವಿ ಸಭೆಯನ್ನು ಶುಕ್ರವಾರ ಏರ್ಪಡಿಸಲಾಗಿತ್ತು.
ಸಭೆ ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಮಾತನಾಡಿ “೨೦೨೪-೨೫ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ ೨೯ರಿಂದ ಶಾಲೆಗಳು ಆರಂಭವಾಗಲಿವೆ.ಮೇ ೨೯ಕ್ಕೆ ಶಾಲೆಗಳಿಗೆ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಆಗಮಿಸುವ ಮೂಲಕ ಸಿದ್ದತಾ ಕಾರ್ಯ ಜರುಗಿಸುವರು.೩೧ ರಂದು ಶಾಲಾ ಪ್ರಾರಂಭೋತ್ಸವ ಜರಗುವುದು.ಮಕ್ಕಳನ್ನು ಪ್ರೀತಿಯಿಂದ ಸ್ವಾಗತಿಸುವುದರ ಜತೆಗೆ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಿ. ಸ್ವಚ್ಛತೆ ಮತ್ತು ಮಕ್ಕಳ ಸುರಕ್ಷತೆಗೆ ಒತ್ತು ಕೊಡಿ. ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ. ಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಸ್ವಾಗತಿಸಿ. ಶಾಲೆಯಲ್ಲಿ ಮೊದಲ ದಿನ ಮಕ್ಕಳಿಗೆ ಸಿಹಿ ಊಟ ಮಾಡಿಸಿ ಬಡಿಸಿ. ಶಾಲೆ ಪ್ರಾರಂಭೋತ್ಸವಕ್ಕೆ ಮುನ್ನ ಶಾಲಾ ಆವರಣ, ಶೌಚಾಲಯ, ಅಡುಗೆ ಮನೆ, ಶಾಲಾ ಕೊಠಡಿಗಳ ಸ್ವಚ್ಛತೆಗೆ ಆದ್ಯತೆ ನೀಡಿ. ಎಂದು ಹೇಳಿದರು.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ ೨೦೨೪-೨೦೨೫ರ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ ಎಂದು ತಿಳಿಸಿದರು.
ಈ ವಾರ್ಷಿಕ ಮಾರ್ಗಸೂಚಿಯಲ್ಲಿ ಮಾಸಿಕ ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆ, ಸಂಭ್ರಮ ಶನಿವಾರ ಸೇರಿ ಇತರ ಯೋಜನೆಗಳನ್ನು ನಿರ್ವಹಿಸುವಂತೆ ಶಾಲಾ ಪ್ರಧಾನ ಗುರುಗಳು ಹಾಗೂ ಸಿ.ಆರ್.ಪಿಗಳು ಎಲ್ಲರೂ ತಮ್ಮ ತಮ್ಮ ಕಾರ್ಯದಲ್ಲಿ ತೊಡಗಲು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ ಮಾತನಾಡಿ “ಅಡುಗೆಯವರ ನೇಮಕಾತಿ.ಆಹಾರ ಧಾನ್ಯಗಳ ಸ್ವಚ್ವತೆ ಶುಚಿರುಚಿ ಗುಣಮಟ್ಟದ ಆಹಾರ ತಯಾರಿಕೆ ರಾಗಿ ಮಾಲ್ಟ ಹಾಗೂ ಮೊಟ್ಟೆ ವಿತರಣೆ ಸಮರ್ಪಕವಾಗಿ ಜರುಗುವ ಜೊತೆಗೆ ಮಕ್ಕಳ ದೈನಂದಿನ ಹಾಜರಾತಿ ಹೆಚ್ಚುವಂತೆ ಕ್ರಮ ವಹಿಸಲು ತಿಳಿಸಿದರು.
ಸಮನ್ವಯ ಶಿಕ್ಷಣ ಕಾರ್ಯ ಚಟುವಟಿಕೆಗಳ ಕುರಿತು ಸವದತ್ತಿ ವಲಯದ ಸಮನ್ವಯ ಸಂಪನ್ಮೂಲ ಶಿಕ್ಷಕ ಎಸ್ ಬಿ ಬೆಟ್ಟದ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವ್ಹಿ.ಸಿ.ಹಿರೇಮಠ ಸೇತುಬಂಧ ಶಾಲಾ ಶೈಕ್ಷಣಿಕ ಯೋಜನೆ ಹಾಗೂ ಶಾಲೆಯಲ್ಲಿ ನಿರ್ವಹಿಸುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ .ತಾಲೂಕಾ ಅಧ್ಯಕ್ಷ ಕಿರಣ ಕುರಿ ಪ್ರೌಢಶಾಲಾ ಶಿಕ್ಷಕರ ಸಂಘದ ಆರ್ ಸಿ ರಾಠೋಡ.ಅನುದಾನಿತ ಶಾಲೆಗಳ ಪರವಾಗಿ ಬಿ ಬಿ ನಾವಲಗಟ್ಟಿ ಶಿಕ್ಷಣ ಸಂಯೋಜಕ ಜಿ ಎಂ ಕರಾಳೆ.ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರತ್ನಾ ಸೇತಸನದಿ, ಮುನವಳ್ಳಿ ವಲಯದ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ಸಿ ವ್ಹಿ ಬಾರ್ಕಿ ಮುರಗೋಡ ವಲಯದ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ದುರಗಪ್ಪ ಭಜಂತ್ರಿ ಯರಗಟ್ಟಿ ವಲಯದ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ವೈ ಬಿ ಕಡಕೋಳ ಸವದತ್ತಿ ಮತ್ತು ಮುನವಳ್ಳಿ ವಲಯಗಳ ಸಂಪನ್ಮೂಲ ವ್ಯಕ್ತಿಗಳಾದ ಡಿ. ಟಿ ಮರಕುಂಬಿ. ಮಂಜು ಗಡೇಕಾರ, ರಾಮಚಂದ್ರಪ್ಪ, ರವಿ ನಲವಡೆ, ಕುಶಾಲ್ ಮುದ್ದಾಪುರ, ಎಸ್. ಎಂ. ಕುಂಬಾರ, ಪಿ.ಸಿ.ಫರೀಟ್ಜಿ, .ಎಸ್.ಚಿಪ್ಪಲಕಟ್ಟಿ, ಎನ್ ಎ ಹೊನ್ನಳ್ಳಿ ಮೊದಲಾದವರು ಉಪಸ್ಥಿತರಿದ್ದರು .
ಸಂಪನ್ಮೂಲ ವ್ಯಕ್ತಿಗಳಾದ ಬಿ ಐ ಚಿನಗುಡಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ಶಾಲಾ ಪ್ರಾರಂಭೋತ್ಸವದ ತಯಾರಿ ಕುರಿತು ಹೇಳಿದರು.ಈ ಸಂದರ್ಭದಲ್ಲಿ ಮುನವಳ್ಳಿ ಹಾಗೂ ಸವದತ್ತಿ ವಲಯಗಳ ಸರಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳು ಹಾಜರಿದ್ದರು.ಪ್ರಾರಂಭದಲ್ಲಿ ರತ್ನಾ ಸೇತಸನದಿ ಪ್ರಾರ್ಥನಾ ಗೀತೆ ಹೇಳಿದರು ಸಿಂದೋಗಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಎನ್ ಎ ಹೊನ್ನಳ್ಳಿ ಕಾರ್ಯ ಕ್ರಮ ನಿರೂಪಿಸಿದರು