ಜ.22 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Must Read

ಸಿಂದಗಿ: ಜ-22 ರವಿವಾರದಂದು ಪಟ್ಟಣದ ಸಂಗಮೇಶ್ವರ ದೇವಸ್ಥಾನದಲ್ಲಿ ಸಾಯಂಕಾಲ 4 ಗಂಟೆಗೆ 3ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.

ಪಟ್ಟಣದ ಡಾ/ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಪೂರ್ವಭಾವಿ ಸಭೆಯು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹಾಸಿಂಪೀರ ವಾಲಿಕಾರ್ ಅವರ ಉಪಸ್ಥಿತಿಯಲ್ಲಿ ಜರುಗಲಿದ್ದು ತಾಲೂಕಿನಲ್ಲಿ 3ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಕನ್ನಡಪರ ಸಂಘಟನೆಕಾರರು ಹಾಗೂ  ತಾಲೂಕಿನ ಎಲ್ಲ ಸಂಘ  ಸಂಸ್ಥೆಗಳ ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಆ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಮನವಿ ಮಾಡಿಕೊಂಡರು.

ಈ ಪತ್ರಿಕಾಗೋಷ್ಠಿಯಲ್ಲಿ ಕಸಾಪ ಗೌರವಾಧ್ಯಕ್ಷ ಮಹಾಂತೆಸ ಪಟ್ಟಣಶೆಟ್ಟಿ, ಎ.ಎಮ್.ಗಾಯಕವಾಡ ವಕೀಲರು, ಗೊಲ್ಲಾಳಪ್ಪಗೌಡ ಪಾಟೀಲ ಮಾಗಣಗೇರಿ, ಕಸಾಪ ಮಾಜಿ ಅಧ್ಯಕ್ಷ ಸಿದ್ದಲಿಂಗ ಚೌಧರಿ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಎಂ.ಎ. ಖತೀಬ, ಶಿವಾನಂದ ಕಲಬುರ್ಗಿ, ಶಿಲ್ಪಾ ಕುದರಗೊಂಡ,  ಜಯಶ್ರೀ ಕುಲಕರ್ಣಿ, ಖಾದರಬಾಷಾ ವಾಲೀಕಾರ, ಸಾಯಬಣ್ಣ ಪುರದಾಳ, ಶಿವಾನಂದ ಬಡಾನವರ ಉಪಸ್ಥಿತರಿದ್ದರು.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group