Sindagi: ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧತೆ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸಿಂದಗಿ: ಕೊರೋನಾ 3 ಅಲೆಯನ್ನು ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಲಿದೆ. ಇತ್ತಿಚೆಗಷ್ಟೆ ಸರ್ಕಾರ ಲಾಕಡೌನ್ ತೆರವುಗೊಳಿಸಿದೆ. ಆದರೆ ಸಾರ್ವಜನಿಕರು ಕೊರೋನಾ ಇಲ್ಲ ಎಂಬ ಭಾವನೆಯಲ್ಲಿ ಯಥಾ ಸ್ಥಿತಿಯನ್ನು ಅನುಸರಿಸುತ್ತಿರುವದು ಭಯಾನಕ ಸಂಗತಿ. ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸುವುದು ನಮ್ಮ ಧರ್ಮ ಎಂದು  ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಹೇಳಿದರು.

ಅವರು ಮಂಗಳವಾರ  ಆಮ್ಲಜನಕ ಸಾಂದ್ರಕ ನೀಡುವಂತೆ  ಉಪ  ಮುಖ್ಯಮಂತ್ರಿ ಡಾ.ಅಶ್ವಥ ನಾರಾಯಣ ಅವರಿಗೆ ಮನವಿ ಸಲ್ಲಿಸಿದ  ಹಿನ್ನಲೆಯಲ್ಲಿ  ಸಿಂದಗಿ, ಆಲಮೇಲ ಮತ್ತು ತಾಂಬಾ ನಗರಗಳಿಗೆ ತಲಾ 2 ರಂತೆ ನೀಡಿರುವ ಆಮ್ಲಜನಕ ಸಾಂದ್ರಕವನ್ನು ಸ್ವೀಕರಿಸಿ ಮಾತನಾಡಿ, ಕೊರೋನಾ ನಿಯಂತ್ರಣದ  ಹಿನ್ನಲೆಯಲ್ಲಿ  ಸಿಂದಗಿ, ಆಲಮೇಲ ಮತ್ತು ತಾಂಬಾ ನಗರಗಳಿಗೆ ಬೇಡಿಕೆಯ ಹಿನ್ನಲೆಯಲ್ಲಿ  ಉಪ ಮುಖ್ಯಮಂತ್ರಿಗಳಿಗೆ ಕೆಲವು ದಿನಗಳ ಹಿಂದೆ ಮನವಿ ಸಲ್ಲಿಸಿದ್ದೆ ಮನವಿಗೆ  ಸ್ಪಂದಿಸಿದ ಉಪ ಮುಖ್ಯಮಂತ್ರಿಗಳು ಆಮ್ಲಜನಕ ಸಾಂದ್ರಕವನ್ನು ನೀಡಿದ್ದಾರೆ ಅವರಿಗೆ ನನ್ನ ಕ್ಷೇತ್ರದ ಪರವಾಗಿ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸದ್ಯ ಜನತೆಯ ಆರೋಗ್ಯವನ್ನು ಕಾಪಾಡುವುದು ಮೊದಲ ಹೆಜ್ಜೆಯಾಗಿದೆ ಸಾರ್ವಜನಿಕರು ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

- Advertisement -
- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!