ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

Must Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ಅಂಗಸಂಸ್ಥೆಯಾಗಿರುವ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ-28ರಂದು “ಪತ್ರಿಕಾ ದಿನಾಚರಣೆ”, ಹಿರಿಯ ಪತ್ರಕರ್ತರಿಗೆ ಸನ್ಮಾನ” ಮತ್ತು “ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 11 ಗಂಟೆಗೆ ಕೆಂಗೇರಿಯ ಹೋಟೆಲ್ ಕದಂಬ ಗೆಸ್ಟ್ ಲೈನ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟಿಸುವರು. ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ ಸುರಕ್ಷಿತಾ ಅಭಿಯಾನಕ್ಕೆ ಚಾಲನೆ ನೀಡುವರು.

ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು
ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ
ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಿದ್ದಾರೆ.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮತ್ತು ಕೆ.ಯೂ.ಡಬ್ಲ್ಯೂ.ಜೆ ಖಜಾಂಚಿ ವಾಸುದೇವ ಹೊಳ್ಳರವರು ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ
ಕೆ. ಸತ್ಯನಾರಾಯಣ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸ್ವರ ಚಿರಂತನ ಮ್ಯೂಸಿಕ್ ಇವೆಂಟ್ಸ್ ನ
ವೀರೇಶ ಎಂ.ಪಿ.ಎಂ. ಅವರಿಂದ ಸಭಾ ಕಾರ್ಯಕ್ರಮಕ್ಕೆ ಮುನ್ನ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group