- Advertisement -
ಬೀದರ: ಭಾಲ್ಕಿ ಪಟ್ಟಣದ ಡೈಮಂಡ್ ಪದವಿಪೂರ್ವ ಕಾಲೇಜಿನ ಬಸ್ ತಡೆದು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಪಾಲಕರು ಧರಣಿ ನಡೆಸಿದರು.
ಡಾವರಗಾಂವ್ ಗ್ರಾಮದ ಬಳಿ ತಡರಾತ್ರಿ ಕಾಲೇಜು ಬಸ್ ತಡೆದು ಅದೇ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಯುವಕರ ಗುಂಪಿನಿಂದ ಈ ಕೃತ್ಯ ನಡೆದಿದೆಯೆನ್ನಲಾಗಿದೆ. ವಿದ್ಯಾರ್ಥಿನಿಯರಿಗೆ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಪ್ರಕರಣ ಜರುಗಿದೆ.
ಈ ಸಂಬಂಧ ವಿದ್ಯಾರ್ಥಿಗಳ ಪಾಲಕರು, ಸಂಘಟನೆಗಳಿಂದ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು ಕೂಡಲೇ ಆರೋಪಿಗಳನ್ನ ಬಂಧಿಸಬೇಕೆಂದು ಒತ್ತಾಯಿಸಿ ಧರಣಿ ನಡೆಸಲಾಯಿತು. ಖಚಕಚಿಂಚೋಳಿ ಪೊಲೀಸ್ ಠಾಣೆಗೆ ಡೈಮಂಡ್ ಕಾಲೇಜ್ ಪ್ರಾಚಾರ್ಯರಿಂದ ದೂರು ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ