ಜಮಖಂಡಿ: ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಚೆಸ್ ಮತ್ತು ಆರ್ಟಿಸ್ಟಿಕ್ ಯೋಗಾ ಸ್ಪರ್ಧೆಗಳೆರಡರಲ್ಲೂ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಮುಗ್ಗಣ್ಣವರ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಬಾಗಲಕೋಟೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು, ಗೋಠೆ ಇವುಗಳ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ನಗರದ ಐತಿಹಾಸಿಕ ಪೋಲೋ ಮೈದಾನದಲ್ಲಿ ಶನಿವಾರ ನಡೆದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಗಿರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.