spot_img
spot_img

ಮೂಡಲಗಿಯಲ್ಲಿ ಸೈಕ್ಲಿಂಗ್ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Must Read

- Advertisement -

ಮೂಡಲಗಿ: ನಗರ ಮಟ್ಟದಲ್ಲಿ ನಡೆಯುವ ಸೈಕ್ಲಿಂಗ ಸ್ಪರ್ಧೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ ಪಾಟೀಲ ಅವರ ನೇತೃತ್ವದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೊಸ್ಕರ ತಂದು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಶುಕ್ರವಾರದಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲಾ ಆವರಣದಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಉಪನಿರ್ದೇಶಕರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಸೈಕ್ಲಿಂಗ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜುರುಗಿದ ತಾಲೂಕಾ ಮಟ್ಟದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರಿಗೆ ಪ್ರತಿಭಾನ್ವೇಷಣೆ ಸೈಕ್ಲಿಂಗ್ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,      ಕೆಎಮ್‍ಎಫ್ ಸಂಸ್ಥೆಯಿಂದ ಗ್ರಾಮೀಣ ಮಕ್ಕಳಿಗಾಗಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಮಕ್ಕಳ ಪ್ರತಿಭೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂಥ ಕಾರ್ಯ ಮಾಡುವಂತಾಗಲಿ ಎಂದು ಹೇಳಿದರು.

ಇಂದಿನ ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳು ಆಟಗಳ ಪರಿಚಯವೇ ಇಲ್ಲ. ಸ್ವಲ್ಪ ಸಮಯ ಸಿಕ್ಕರೂ ಮೊಬೈಲ್, ಲ್ಯಾಪ್‍ಟಾಪ್ ಮುಂದೆ ಕುಳಿತುಕೊಂಡು ಬಿಡುತ್ತಾರೆ. ಇದು ಎಲ್ಲ ಹೆತ್ತವರ ಅಳಲು ಇಂತ ಪರಿಸ್ಥಿತಿಯಲ್ಲಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ದೇಹವನ್ನು ಸದೃಢಗೊಳಿಸಬಹುದು ಹಾಗೂ ರಾಜ್ಯ ಮಟ್ಟದವರೆಗೂ ತಮ್ಮ ಗ್ರಾಮದ ಕೀರ್ತಿಯನ್ನು ಹೆಚ್ಚಿಸುವ ಶಕ್ತಿ ಮಕ್ಕಳಲ್ಲಿದೆ ಎಂದರು.

- Advertisement -

ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ಜಿ. ಶ್ರೀನಿವಾಸ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗಾಗಿ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ ಪಾಟೀಲ ಅವರ ನೇತೃತ್ವದಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಹಂತ ಹಂತವಾಗಿ ಕಾರ್ಯಕ್ರಮಗಳನ್ನು ಮಾಡಿ ರಾಜ್ಯ ಮಟ್ಟದಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಆರ್ ಬಿ ಜಂಬಗಿ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಪ್ಪ ಪಾಟೀಲ, ಪುರಸಭೆ ಸದಸ್ಯರಾದ ರವೀಂದ್ರ ಸಣ್ಣಕ್ಕಿ, ಸಿದ್ದಪ್ಪ ಮಗದುಮ್ಮ, ಪಾಡುರಂಗ ಮಹೇಂದ್ರಕರ, ಶಿವು ಚಂಡಕಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಮೂಡಲಗಿ ಹಾಲು ಒಕ್ಕೂಟ ಉಪಕೇಂದ್ರದ ಅಧಿಕಾರಿ ರವಿ ತಳವಾರ, ಪಶು ವೈದ್ಯಾಧಿಕಾರಿ ಡಾ. ಪ್ರಕಾಶ ಬೆಳಗಲಿ, ಹಾಲು ವಿಸ್ತರಣಾಧಿಕಾರಿ ವಿಠ್ಠಲ ಲೋಕುರೆ, ಸಚೀನ ಪಡದಲ್ಲಿ, ಮಾರುಕಟ್ಟೆ ಅಧಿಕಾರಿ ಉಮೇಶ ನಾಯ್ಕ್ ಮುಂಖಡರಾದ ರಮೇಶ ಸಣ್ಣಕ್ಕಿ, ಮರೇಪ್ಪ ಮರೇಪ್ಪಗೋಳ, ಬಸು ಝಂಡೆಕುರಬರ, ಪ್ರಕಾಶ ಮುಗಳಖೋಡ, ಸಿದ್ದು ಗಡ್ಡೆಕಾರ, ಹುಸೇನಸಾಬ ಶೇಖ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

Shahid Kapoor Birthday: ಈ ಬಾಲಿವುಡ್ ಹೀರೊ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಶಾಹಿದ್ ಕಪೂರ್ ಬಾಲಿವುಡ್ ನ ಬಹು ಬೇಡಿಕೆಯ ನಟರಲ್ಲಿ ಒಬ್ಬರು. ಇಂದು (ಫೆಬ್ರವರಿ 25) ಅವರ ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಎರಡು ದಶಕಗಳಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group