spot_img
spot_img

ಪ್ರೊ.ಜ್ಯೋತಿ ಹೊಸೂರ ನಿಧನ

Must Read

spot_img

ಬೆಳಗಾವಿ – ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆದ ಪ್ರೋ. ಜ್ಯೋತಿ ಹೊಸೂರ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 85 ವರ್ಷ ವಯಸ್ಸಾಗಿತ್ತು. ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು ‘ಗಾದೆ, ಒಡಪು, ಗ್ರಾಮದೇವತೆ ‘ಅವರು ಮಾಡಿದ ಸಂಶೋಧನೆಗಳು ವಿದ್ವತ್ ಪ್ರಪಂಚದಲ್ಲಿ ಗೌರವ ಆದರಕ್ಕೆ ಪಾತ್ರವಾಗಿದ್ದವು.

ರಾಯಭಾಗನಂತಹ ಸಣ್ಣ ಹಳ್ಳಿಯಲ್ಲಿದ್ದರೂ ಅವರು ನಡೆಸಿದ ಸಂಶೋಧನೆಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಚರ್ಚೆ ಆಗುತ್ತಿದ್ದವು. ಶಂಬಾ ಜೋಶಿಯವರ ಸಂಶೋಧನೆಯ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಜ್ಯೋತಿ ಹೊಸೂರ ಅವರು ಕಾಲಗತಿ ಪ್ರಕಾಶನ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಆ ಮೂಲಕ ಶಂಬಾ ಜೋಶಿಯವರ ಸಮಗ್ರ ಸಾಹಿತ್ಯ ವನ್ನು ಪ್ರಕಟಿಸಿದ್ದರು. ಸಂಗೊಳ್ಳಿ ರಾಯಣ್, ಕಿತ್ತೂರು ಚೆನ್ನಮ್ಮ ‘ಕನಕದಾಸ, ವಚನ ಸಾಹಿತ್ಯ ಕುರಿತು ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ’ ಬೆಟಗೇರಿ ಕೃಷ್ಣ ಶರ್ಮಾ ಸಂಶೋಧಕ ಪ್ರಶಸ್ತಿ ಮತ್ತು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಹೊಸೂರ ಅವರು ಪತ್ನಿ, ಮಗ, ಹಾಗೂ ಮಗಳನ್ನು ಅಗಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡಮಿ ಸದಸ್ಯರಾದ ಡಾ.ಸರಜೂ ಕಾಟ್ಕರ,ಬೆಳಗಾವಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ, ಮೋಹನ ಪಾಟೀಲ, ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ರಾಮಕೃಷ್ಣ ಮರಾಠೆ ಹಾಗೂ ಪದಾಧಿಕಾರಿಗಳಾದ ಎಂವೈ ಮೆಣಸಿನಕಾಯಿ, ಸಿ.ಎಂ ಬೂದಿಹಾಳ ಎ.ಎ ಸನದಿ 1 ಬಿ ಎಫ್ ಕಲ್ಲನ್ನವರ ಡಾ. ಎ ಎಲ್ ಪಾಟೀಲ, ಡಾ ಬಿ ಜೆ ಧಾರವಾಡ ಮುಂತಾದವರು ಅಂತಿಮ ನಮನ ಸಲ್ಲಿಸಿದರು.

ಸಾವಿನಲ್ಲೂ ಸಾರ್ಥಕತೆ ಮೆರೆದರು.

ಪ್ರೊ. ಜ್ಯೋತಿ ಹೊಸೂರ ಅವರು ತಮ್ಮ ದೇಹವನ್ನು ಕೆಎಲ್ಈ ಸೊಸಾಯಿಟಿಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

- Advertisement -
- Advertisement -

Latest News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ...
- Advertisement -

More Articles Like This

- Advertisement -
close
error: Content is protected !!