ಸಿಂದಗಿ: ರಾಷ್ಟ್ರೀಯ ಮೀನುಗಾರರ ಸಂಘದ ಉಪಾಧ್ಯಕ್ಷ, ಬಿಜೆಪಿ ಯುವ ಮುಖಂಡ ಡಾ.ಗೌತಮ ಚೌಧರಿ ದೇಶದ ರಾಷ್ಟ್ರಪತಿ ರಾಮನಾಥ ಕೋವಿಂದರನ್ನು ಭೇಟಿಯಾಗಿ ರಾಜ್ಯದ ಮೀನುಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರ ಮತ್ತು ಸಮಾಜದ ಬೇಡಿಕೆಗಳನ್ನು ಈಡೇರಿಸುವ ಕುರಿತಂತೆ ಮನವಿ ಮಾಡಿಕೊಂಡರು.
ಸಮಸ್ಯೆಗಳನ್ನು ಆಲಿಸಿದ ರಾಷ್ಟ್ರಪತಿಯವರು ಸಕಾರಾತ್ಮಕವಾಗಿ ಸ್ಪಂದಿಸಿ ಸಮಾಜದ ಬೇಡಿಕೆಗಳನ್ನು ಈಡೇರಿಸುವದಾಗಿ ಭರವಸೆ ನೀಡಿ, ಮಾಹಾಮಾರಿ ಕೋರೋನಾ ರೋಗದ ಸಮಯದಲ್ಲಿ ಅವಿರತರಾಗಿ ಸಮರ್ಪಣಾ ಭಾವದಿಂದ ತಮ್ಮ ವೈದ್ಯಕೀಯ ಚಿಕಿತ್ಸೆ ನೀಡಿದ್ದನ್ನು ಪ್ರಶಂಸೆ ವ್ಯಕ್ತಪಡಿಸಿ ನಿಮ್ಮ ಕಾರ್ಯ ಮುಂದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.