spot_img
spot_img

ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ

Must Read

- Advertisement -

ಸಿಂದಗಿ: ಸುಮಾರು 20 ವರ್ಷಗಳ ಹಿಂದೆ ನೆರೆ ಹಾವಳಿಗೆ ತುತ್ತಾಗಿ ತಾವರಖೇಡ ಗ್ರಾಮ ಮುಳುಗಡೆಗೊಂಡಿತ್ತು ಅಂದಿನಿಂದ ಇಲ್ಲಿಯವರೆಗೆ ಫಲಾನುಭವಿಗಳ ಸಮಸ್ಯೆಗೆ ಹಿಂದಿನ ಸರ್ಕಾರ ಸ್ಪಂದಿಸದ ಕಾರಣ ನಮ್ಮ ಸರಕಾರಕ್ಕೆ ಜನತೆ ಆರ್ಶಿರ್ವಾದ ನೀಡಿದ್ದು ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಇದೇ 25 ರಂದು ತಾವರಖೇಡ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ರ ನೇತೃತ್ವದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅದ್ಯಕ್ಷ ಸುರೇಶ ಪೂಜಾರಿ ತಿಳಿಸಿದರು.

ಪಟ್ಟಣದ ಎಪಿಎಂಸಿ ಯಾರ್ಡನಲ್ಲಿರುವ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು 20 ವರ್ಷಗಳ ಹಿಂದೆ ನೆರೆ ಹಾವಳಿಯಿಂದ ತಾವರಖೇಡ ಹಿನ್ನೀರಿನಿಂದ ಗ್ರಾಮದ ತುಂಬೆಲ್ಲ ನೀರು ಆವರಿಸಿ ಗ್ರಾಮವನ್ನು ಸ್ಥಳಾಂತರಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು ಆದರೆ ಇನ್ನೂವರೆಗೆ ಫಲಾನುಭವಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೇ  ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯ ಕೂಡಾ ಮಾಡಿಲ್ಲ ನಮ್ಮ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ಚುನಾವಣೆ ಸಂದರ್ಭದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿರುವಂತೆ 5 ಗ್ಯಾರೆಂಟಿಗಳಾದ ಶಕ್ತಿ ಯೋಜನೆ, ಉಚಿತ ವಿದ್ಯುತ್ , ಅನ್ನಬಾಗ್ಯ ಯೋಜನೆ, ನಂತರ ಇದೇ 30 ರಂದು ಗೃಹಲಕ್ಷ್ಕಿ ಯೋಜನೆಗೆ ಚಾಲನೆ ದೊರಕಲಿದೆ ಸಿಂದಗಿ ಮತಕ್ಷೇತ್ರದಲ್ಲಿ 5 ಕಡೆ ಈ ಯೋಜನೆಗೆ ಚಾಲನೆ ದೊರಕಲಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿ ದಿಟ್ಟ ಹೆಜ್ಜೆಗಳನ್ನು ಇಟ್ಟು ಇಡೀ ಭಾರತ ದೇಶಕ್ಕೆ ಮಾದರಿಯ ಕರ್ನಾಟಕ ಎನಿಸಿಕೊಂಡಿದೆ. ಇದಕ್ಕು ಮುನ್ನ ಹಲವಾರು ಸರಕಾರಗಳು ಆಡಳಿತ ನಡೆಸಿವೆ ಆದರೆ ಚುನಾವಣೆ ಪ್ರಣಾಳಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ ಆದರೆ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದುಕೊಂಡು ಜನಮಾನಸದಲ್ಲಿ ಉಳಿದುಕೊಂಡಿದೆ ಎಂದು ಹೇಳಿದರು.

- Advertisement -

ಈ ಸಂದರ್ಭದಲ್ಲಿ ಮುಸ್ತಾಕ ಮುಲ್ಲಾ, ಎಸ್.ಕೆ.ಪೂಜಾರಿ, ಎಸ್.ಬಿ.ಖಾನಾಪೂರ, ಶಿವನಗೌಡ ಬಿರಾದಾರ ಗಬಸಾವಳಗಿ, ಚೆನ್ನು ವಾರದ, ಡಾ. ಶಿವಾನಂದ ಹೊಸಮನಿ, ಭೀಮು ವಾಲಿಕಾರ, ಶೌಕತಲಿ ಸುಂಬಡ, ಬಸವರಜ ಯರನಾಳ, ಭೀಮು ಬುಳ್ಳಾ, ಖಾದರ ಬಂಕಲಗಿ, ಶಾಂತೂ ರಾಣಾಗೋಳ ಸೇರಿದಂತೆ ಅನೇರಿದ್ದರು.

- Advertisement -
- Advertisement -

Latest News

ಮೂಡಲಗಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ ; ಗಮನ ಸೆಳೆದ ಮಕ್ಕಾ ಮದೀನಾ ರೂಪಕಗಳು

ಮೂಡಲಗಿ: ಮಹಾನ್ ಮಾನವತಾವಾದಿ, ಮಹಾನ್ ಚಾರಿತ್ರ್ಯ ವಂತ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಬಿಟಿಟಿ ಕಮೀಟಿ ಆಯೋಜನೆಯಲ್ಲಿ ಪಟ್ಟಣದ ಸಮಸ್ತ ಮುಸ್ಲಿಂ ಬಾಂಧವರು...
- Advertisement -

More Articles Like This

- Advertisement -
close
error: Content is protected !!
Join WhatsApp Group