ಎಮ್ಈಎಸ್, ಶಿವಸೇನೆಗಳನ್ನು ರಾಜ್ಯದಲ್ಲಿ ನಿಷೇಧಿಸಿ – ಸತೀಶ ಕವಲಗಿ

Must Read

ಸಿಂದಗಿ: ಕರ್ನಾಟಕ ರಾಜ್ಯದ 7 ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಬರುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟನೆಗಳ ಪದಾಧಿಕಾರಿಗಳು ಡಿ. 15 ರಂದು ಕರ್ನಾಟಕ ಗಡಿ ನಾಡು ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿ ನಾಡದ್ರೋಹ ಕೃತ್ಯವೆಸಗಿದ್ದು ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕ ಸತೀಶ ಕವಲಗಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ಭಾವನೆಗಳಿಗೆ ಧಕ್ಕೆ ತರುವಂತ ಕೃತ್ಯಗಳಿಗೆ ಮಹಾರಾಷ್ಟ್ರ ಸರಕಾರ ಸಂಘಟನೆಗಳಿಗೆ ಪ್ರೋತ್ಸಾಹಿಸುತ್ತಿದೆ. ಎಂಇಎಸ್ ಮತ್ತು ಶಿವಸೇನೆ ಪದೇ ಪದೇ ಕನ್ನಡಕ್ಕೆ ಅವಹೇಳನ ಮಾಡುತ್ತಲೇ ಬರುತ್ತಿದ್ದು ಆದರೆ ಸರಕಾರ ಕೂಡಲೇ ಈ ಸಂಘಟನೆಗಳನ್ನು ಕರ್ನಾಟಕ ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಮತ್ತು ಕನ್ನಡದ ಧ್ವಜವನ್ನು ಸುಟ್ಟಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಈ ಸಂಘಟನೆಗಳ ಪುಂಡಾಟಕ್ಕೆ ಬ್ರೇಕ್ ಹಾಕಬೇಕು. ಕಾರಣ ಸರಕಾರ ಕೂಡಲೇ ಎಚ್ಚೆತ್ತುಕೊಂಡು ಈ ಸಂಘಟನೆಗಳನ್ನು ರಾಜ್ಯದಲ್ಲಿ ರದ್ದುಗೊಳಿಸಬೇಕು ಹಾಗೂ ಇಲ್ಲಿರುವ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರನ್ನು ಗುಂಡಾ ಕಾಯ್ದೆಯಡಿ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗಿಳಿದು ಉಗ್ರವಾದ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Latest News

ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಒಂದು ಭೇಟಿ

ನಾವು ಶಿರಸಿಯಿಂದ ಬನವಾಸಿ ಬಸ್ಸು ಹತ್ತಿದಾಗಲೇ ನಾಲ್ಕೂವರೆ ಆಗಿತ್ತು. ಶಾಲೆ ಬಿಡುವ ವೇಳೆ ಬಸ್ ರಷ್ ಆಗಿತ್ತು. ಬನವಾಸಿಯಲ್ಲಿ ಇಳಿದಾಗ ಐದೂವರೆ ಆಗಿತ್ತು. ಕ್ಯಾಂಟಿನ್‌ನಲ್ಲಿ ಟೀ...

More Articles Like This

error: Content is protected !!
Join WhatsApp Group