spot_img
spot_img

ಕಾಂಗ್ರೆಸ್ ನ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Must Read

spot_img
- Advertisement -

ಸಂಸದ ಈರಣ್ಣ ಕಡಾಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಮೂಡಲಗಿ: ರಾಜ್ಯದಲ್ಲಿ ಅನಿಯಮಿತ ವಿದ್ಯುತ್ ಪೂರೈಕೆ, ರೈತರ ಪಂಪಸೆಟ್‌ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್, ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ, ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು, ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ವಿಫಲವಾದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ, ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದ ನೂರಾರು ಕಾರ್ಯಕರ್ತರು ಹಾಗೂ ರೈತರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ನಗರದ ಕಲ್ಮೇಶ್ವರ ಸರ್ಕಲ್‌ನಲ್ಲಿ ಜಮಾಯಿಸಿದ ರೈತ ಮುಖಂಡರು, ಕಾರ್ಯಕರ್ತರು ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಂಗ್ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ರೈತರ ಯೋಜನೆಗಳನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮಾತನಾಡಿ, ರೈತರ ಜಮೀನುಗಳಲ್ಲಿ ಇರುವ ಬೋರ್‌ವೆಲ್ ಹಾಗೂ ತೆರೆದ ಬಾವಿಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳಲು ಹಗಲು ಹೊತ್ತಿನಲ್ಲಿ ಲೋಡ್ ಶೆಡ್ಡಿಂಗ್ ಇಲ್ಲದೇ ನಿರಂತರ ಕನಿಷ್ಠ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡಬೇಕು. ಮಳೆಯ ಅಭಾವದಿಂದ ರಾಜ್ಯದ 143ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ತೀವ್ರವಾದ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಯುದ್ಧೋಪಾದಿಯಲ್ಲಿ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಪ್ರತಿ ವರ್ಷ ಸಂಗ್ರಹವಾಗಬೇಕಿದ್ದ ನೀರಿನ ಪ್ರಮಾಣವು ಕುಸಿತ ಕಂಡಿದ್ದು, ಜಲಾಶಯಗಳಿಗೆ ಒಳಹರಿವು ಕೂಡ ಕಡಿಮೆ ಇದೆ. ಹೀಗಾಗಿ ಭವಿಷ್ಯದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಉಂಟಾಗುವ ಆತಂಕ ಎದುರಾಗಿದೆ ಎಂದರು.                                                                                                                                                                                                                                     

- Advertisement -

ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಜಲಾಶಯಗಳಲ್ಲಿ ಹಾಲಿ ಇರುವ ನೀರಿನ ಸದ್ಬಳಕೆಯ ಬಗ್ಗೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 100 ಜನ ರೈತರ ಆತ್ಮಹತ್ಯೆ ಪ್ರಕರಣಗಳ ವರದಿಯಾಗಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ರೈತರ ಆತ್ಮಹತ್ಯೆಯಂತಹ ಅನಾಹುತಗಳಿಗೆ ಆಸ್ಪದ ಕೊಡದಿರುವ ರೀತಿಯಲ್ಲಿ ರೈತ ವರ್ಗಕ್ಕೆ ಧೈರ್ಯ ತುಂಬುವ ಮತ್ತು ಅವರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳನ್ನು ಕೂಡಲೇ ಹಮ್ಮಿಕೊಳ್ಳಬೇಕೆಂದು ಆಗ್ರಹಿಸಿದರು.                                                                                                                                                                                                                       

ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ  ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ ನಿಧಿ ಯೋಜನೆ, ರೈತ ವಿದ್ಯಾನಿಧಿ ಯೋಜನೆ, ಭೂ ಸಿರಿ ಯೋಜನೆ, ಶ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ ಕಾನೂನು, ಜಿಲ್ಲೆಗೊಂದು ಗೋಶಾಲೆ ಯೋಜನೆ, ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಈ ಎಲ್ಲ ಯೋಜನೆಗಳನ್ನು ರದ್ದು ಮಾಡುವ ಮೂಲಕ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಕಿಡಿಕಾರಿದರು.                                                                                                                                                                                                                                       

ಸರ್ಕಾರದ ಜನವಿರೋಧಿ ನಡೆ ಖಂಡಿಸಿ ಸೆ.08 ರಂದು ರಾಜ್ಯಾದ್ಯಂತ ತಾಲೂಕಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ನಂತರ ಮೂಡಲಗಿ ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ ಪ್ರಮುಖರಾದ ಪ್ರಕಾಶ ಮಾದರ, ಬಸವರಾಜ ಹಿಡಕಲ್, ಶ್ರೀಶೈಲ ಪೂಜೇರಿ, ಡಾ.

ಬಿ.ಎಂ ಪಾಲಭಾಂವಿ, ಮಹಾಲಿಂಗ ವಂಟಗೂಡಿ, ಈಶ್ವರ ಮುರಗೋಡ, ಮಲ್ಲಪ್ಪ ನೇಮಗೌಡರ, ಸುರೇಶ ಸಣ್ಣಕ್ಕಿ, ಬಸನಗೌಡ ಪಾಟೀಲ, ಸಿದ್ದಪ್ಪ ಬಿಸಗುಪ್ಪಿ, ಗೌಡಪ್ಪ ಕೊಟಗಿ, ಸುರೇಶ ಈರೇಶನವರ, ಬಸವರಾಜ ನಿಡಗುಂದಿ, ಮಂಡಲ ಪದಾಧಿಕಾರಿಗಳಾದ ಶ್ರೀಕಾಂತ ಕೌಜಲಗಿ, ಬಸವರಾಜ ಗಾಡವಿ, ಸುರೇಶ ಮಠಪತಿ, ಮಹಾದೇವ ಮಸರಗುಪ್ಪಿ, ಪ್ರಭು ಹಿರೇಮಠ, ಅಡಿವೆಪ್ಪ ಕುರಬೇಟ ಸೇರಿದಂತೆ ರೈತರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಸ್ ಎಂ ಕೃಷ್ಣ ನಿಧನಕ್ಕೆ ಕಡಾಡಿ ಸಂತಾಪ

ಮೂಡಲಗಿ:ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಅಪಾರ...
- Advertisement -

More Articles Like This

- Advertisement -
close
error: Content is protected !!
Join WhatsApp Group