ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

Must Read

ಬೀದರ – ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ಐಎ ಹಾಗೂ ಇಡಿ ದಾಳಿ ಹಿನ್ನೆಲೆಯಲ್ಲಿ ದಾಳಿ ಖಂಡಿಸಿ ಇಂದು ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ಪ್ರತಿಭಟನೆ ನಡೆಯಿತು.

ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯ ನೂರಾರಕ್ಕೂ ಅಧಿಕ ಜನರು ಹಾಗೂ ಮಕ್ಕಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪಿಎಫ್.ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ‌ ವಿರುದ್ದ ಘೋಷಣೆ ಕೂಗಲಾಯಿತು.

ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಹುಮ್ನಾಬಾದ್ ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group