spot_img
spot_img

ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ಆ.೧೨ ಬೆಂಗಳೂರಿನಲ್ಲಿ ಬೃಹತ್ ಹೋರಾಟ- ಲೋಕನ್ನವರ

Must Read

- Advertisement -

ಮೂಡಲಗಿ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಆ.೭ ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ ಆ.೧೨ ರಂದು ರಾಜ್ಯ ಮಟ್ಟದ ಹೋರಾಟಕ್ಕಾಗಿ ಬೆಂಗಳೂರಿನ ಫ್ರೀಡಂಪಾರ್ಕನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರಭಟನೆಯಲ್ಲಿ ಸಮಸ್ತ ಶಿಕ್ಷಕರು ಭಾಗವಹಿಸಬೇಕೆಂದು ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಮ್.ಲೋಕನ್ನವರ ಹೇಳಿದರು.

ಸೊಮವಾರದಂದು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮೂಡಲಗಿ, ತಾಲೂಕಾ ಘಟಕದಿಂದ ಆ. ೧೨ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಹೋರಾಟದ ಬಗ್ಗೆ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರರಿಗೆ ಶಿಕ್ಷಕರ ರಾಜ್ಯ ಮಟ್ಟದ ಹೋರಾಟದ ಕುರಿತು ಹಾಗೂ ಶಿಕ್ಷಕರಿಗೆ ಆಗಿರುವ ಅನ್ಯಾಯದ ಕುರಿತು ಚಳವಳಿಯ ಪತ್ರ ನೀಡಿ ಹೋರಾಟಕ್ಕೆ ಬೆಂಬಲಿಸಲು ಕೋರಿ ಮನವಿ ಸಲ್ಲಿಸಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ಬಗ್ಗೆ ಸರಕಾರಕ್ಕೆ ಸಾಕಷ್ಟು ಬಾರಿ ಮನವರಿಕೆ ಮಾಡಿದರು ಕೂಡಾ ಸ್ಪಂದಿಸಿಲ್ಲ ಎಂದರು.

ಶಿಕ್ಷಕರ ಸಂಘದ ಮೂಡಲಗಿ ತಾಲೂಕಾ ಘಟಕದ ಅಧ್ಯಕ್ಷ ಎಮ್.ಜಿ,ಮಾವಿನಗಿಡದ ಮತ್ತು ಪ್ರಧಾನ ಕಾರ್ಯದರ್ಶಿ ಮಾತನಾಡಿ, ೨೦೧೭ ರವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, ೨೦೧೭ ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ “ಪಧವಿಧರ ಶಿಕ್ಷಕ” ರೆಂದು ಪದಾನಾಮೀಕರಿಸುವುದು, ೨೦೧೬ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ೧-೫ಕ್ಕೆ ಸೀಮಿತಗೋಳಿಸಿರುವುದನ್ನು ಹಿಂಪಡೆಯಬೇಕು ಹಾಗೂ ಅರ್ಹ ವಿದ್ಯಾರ್ಹತೆ ಪೂರೈಸಿದ ೧-೮ ನೇ ತರಗತಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿದ ೨೦೧೬ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕೆಂಬ ನಮ್ಮ ಹೋರಾಟದ ಮೂಲಕ ಸರಕಾರವನ್ನು ಒತ್ತಾಯಿಸಲಾಗುವದು ಎಂದರು.

- Advertisement -

ಈ ಸಮಯದಲ್ಲಿ ಶಿಕ್ಷಕರ ಸಂಘಟನೆಯ ಎಲ್,ಎಮ್.ಬಡಕಲ್, ಎಸ್.ಎಮ್.ಕುರಣಗಿ, ಬಿ.ಬಿ.ಕೇವಟಿ, ಮಾಲತೇಶ ಸಣ್ಣಕ್ಕಿ, ಡಿ.ಜೆ.ಕಲ್ಲಾರಕೊಪ್ಪ, ರಾಜು ಕೋಳದುರ, ಎಸ್.ಎಲ್.ಪಾಟೀಲ, ಆರ್.ಎನ್.ಬಟಕುರ್ಕಿ, ಬಿ.ಬಿ.ತೇರದಾಳ, ಎಸ್.ಎಚ್.ಯಡ್ರಾಂವಿ, ಎಮ್.ಪಿ.ಲಂಗೋಟಿ, ಜಿ.ವೈ.ಖಾನಟ್ಟಿ, ಎಸ್.ಬಿ.ಪಾಟೀಲ, ಎಸ್.ಎ.ದಡ್ಡಿಮನಿ, ಪಿ.ಟಿ.ಮಾವರಕರ, ಎಸ್.ಎಮ್.ದಬಾಡಿ, ಎನ್.ಜಿ.ಹೆಬ್ಬಳ್ಳಿ,ವೈ.ಡಿ.ಜಲ್ಲಿ, ಜಿ.ವೈ.ಕೆಳಕರ, ಕೃಷ್ಣಾ ಕೌಜಲಗಿ ಮತ್ತಿತರರು ಇದ್ದರು.

- Advertisement -
- Advertisement -

Latest News

ಶಿಕ್ಷಕರಾದ ಮೆಟ್ಯಾಲಮಠ ರವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಬೆಳಗಾವಿ:-ತಾಲೂಕಿನ ಹಿಂಡಲಗಾ ವಿಜಯನಗರ ದ ಸರಕಾರಿ ಪ್ರಾಥಮಿಕ ಮರಾಠಿ ಶಾಲೆಯ ಕ್ರಿಯಾಶೀಲ ಕನ್ನಡ ಶಿಕ್ಷಕರಾದ ರುದ್ರಯ್ಯ ಈರಯ್ಯ ಮೆಟ್ಯಾಲಮಠ ರವರಿಗೆ ತಾಲೂಕು ಆದರ್ಶ ಶಿಕ್ಷಕ ಪ್ರಶಸ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group