ಬೀದರ – ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಲೇ ಪ್ರತಿಭಟನೆಯ ಬಿಸಿ ಅವರಿಗೆ ತಟ್ಟಿದೆ.
ಕಾಂಗ್ರೆಸ್ ಪಕ್ಷದ ಬ್ಲಾಕ್ ಯುವ ಕಾರ್ಯಕರ್ತ ರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯನ್ನು ಬೀದರ್ ಕಾಂಗ್ರೆಸ್ ಬ್ಲಾಕ್ ಯುವ ಸಮಿತಿ ನೇತೃತ್ವದಲ್ಲಿ ಅಂಬೇಡ್ಕರ್ ಸರ್ಕಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸೈಕಲ್ ಮೇಲೆ ಸಿಲಿಂಡರ್ ಹಿಡಿದು ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೈಲ ಬೆಲೆ, ಅಡುಗೆ ಅನಿಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ತತ್ತರಗೊಂಡಿದ್ದು ತಕ್ಷಣವೇ ಕೇಂದ್ರದ ಮೋದಿ ಸರ್ಕಾರ ಬೆಲೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ವರದಿ: ನಂದಕುಮಾರ ಕರಂಜೆ, ಬೀದರ