spot_img
spot_img

ಬಿಲ್ಕಿಸ್ ಬಾನೋ ಹತ್ಯಾ ಆರೋಪಿಗಳ ವಿರುದ್ಧ ಬೀದರ್ ನಲ್ಲಿ ಪ್ರತಿಭಟನೆ

Must Read

spot_img

ಬೀದರ – ತುಂಬು ಗರ್ಭಿಣಿ ಬಿಲ್ಕಿಸ್ ಬಾನೋ ಅವರನ್ನು ಹತ್ಯೆ ಮಾಡಿದ್ದ ಅಪರಾಧಿಗಳನ್ನು ಬಿಡುಗಡೆ ಮಾಡಿದ ಕ್ರಮ ಖಂಡಿಸಿ ಗಡಿ ಜಿಲ್ಲೆ ಬೀದರ್ ನಲ್ಲಿ ಅಖಿಲ ಭಾರತ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

ಗುಜರಾತ್ ಸರ್ಕಾರ ಮುಸ್ಲಿಂ ಹೆಣ್ಣು ಮಗಳು ಎಂಬ ಕಾರಣಕ್ಕೆ ಸನ್ನಡತೆ ಆಧಾರ ಮೇಲೆ 11 ಅತ್ಯಾಚಾರಿಗಳಗೆ ಬಿಡುಗಡೆ ಮಾಡಿ ನಮ್ಮ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ನಮ್ಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಂಬು ಗರ್ಭಿಣಿ ಬಿಲ್ಕಿಸ್ ಬಾನು ಅವರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಅವರ ಮೂರು ವರ್ಷದ ಮಗಳು ಹಾಗೂ ಕುಟುಂಬದ ಇತರೆ ಆರು ಮಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ನಿರ್ಧಾರ ತೆಗೆದುಕೊಂಡಿದ ಇದರಿಂದ ನಮ್ಮ ದೇಶಾದ್ಯಂತ ಹೆಣ್ಣು ಮಕ್ಕಳಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ರಕ್ಷಣೆ ಇಲ್ಲ ಎಂದು ಮುಸ್ಲಿಂ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಈ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಇಂತಹ ಪ್ರಕರಣ ಗುಜರಾತ್ ಸರ್ಕಾರ ಯಾಕೆ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ಹನ್ನೊಂದು ಮಂದಿ ತಪ್ಪಿತಸ್ಥರನ್ನು ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿದ್ದು ಮೆರವಣಿಗೆ ಮಾಡಲಾಗುತ್ತದೆ ಇಂತಹ ಸರ್ಕಾರ ನಮಗೆ ಯಾಕೆ ಬೇಕು ಎಂದು ಆಕ್ರೋಶ ವ್ಯಕ್ತವಾಯಿತು.

ಚಿತ್ರದುರ್ಗದ ಮಠದ ಶಿವಮೂರ್ತಿ ಸ್ವಾಮೀಜಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ ತಕ್ಷಣ ಸ್ವಾಮಿಗಳನ್ನು ಶೀಘ್ರವಾಗಿ ಬಂಧಿಸಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು ಮಹಿಳೆಯರು.


ವರದಿ: ನಂದಕುಮಾರ ಕರಂಜೆ,ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!