- Advertisement -
ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ. ೦೫ ರಂದು ಕೊನೆಯ ದಿನಾಂಕವಾಗಿರುತ್ತದೆ.
ನ.೫ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿಕ್ಷಣ ಸಂಯೋಜಕರಾದ ಸತೀಶ ಬಿ.ಎಸ್ ಮೊ-೯೪೪೮೯೫೩೬೬೬ ಗೆ ಸಂಪರ್ಕಿಸಬಹುದು ಎಂದು ಬಿಇಒ ಎ.ಸಿ.ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.