- Advertisement -
ಸಿಂದಗಿ– ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಲಾ ವಿಭಾಗದಲ್ಲಿ ರೂಪಾ ಕಡಕೋಳ 585(97.5%) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ, ಮಹಮ್ಮದ ಮೋಶಿನ್ ನದಾಫ 576(96%) ಅಂಕ ಪಡೆದು ದ್ವಿತೀಯ, ದಯಾನಂದ ಹಿರೇಮಠ 575 (95.83%) ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಒಟ್ಟು 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅಭಿಷೇಕ ಕಲಾಲ 513 (85.5%) ಪ್ರಥಮ, ಸುಜಾತಾ ತಳವಾರ 504(84%) ಅಂಕ ಪಡೆದು ದ್ವಿತೀಯ, ಕಿರಣ ಬಿರಾದಾರ 493(82.16%) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
- Advertisement -
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಮತ್ತು ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯ ಎ.ಆರ್. ಹೆಗ್ಗಣದೊಡ್ಡಿ ಮತ್ತು ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.