Homeಸುದ್ದಿಗಳುಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

ಮೂಡಲಗಿ: ಚಿಕ್ಕ ಮಕ್ಕಳಲ್ಲಿ ಸಾಂಕ್ರಾಮಿಕವಾಗಿ ಹರಡುವ ಪೋಲಿಯೋ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವುದರ ಮೂಲಕ ಭಾರತವನ್ನು ಪೋಯೊ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು.

ರವಿವಾರ ಫೆ-27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ಸದೃಢ ಭಾರತಕ್ಕಾಗಿ ಉತ್ತಮ ಪ್ರಜೆಗಳನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳೆರೆಡೂ ಕಟ್ಟುನಿಟ್ಟಾಗಿ ಪಲ್ಸ್ ಪೋಲಿಯೋ ರಾಷ್ಟ್ರೀಯ ಅಭಿಯಾನ ನಡೆಸಿಕೊಂಡು ಬಂದಿವೆ. ಪೋಷಕರು ಮರೆಯದೆ 5 ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.

ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮೀ, ಎಸ್. ಕೆ ಕರೋಳಿ, ಆನಂದ ಕುಲಕರ್ಣಿ, ಎಸ್. ಸಿ ಅರಳಿಕಟ್ಟಿ ಸೇರಿದಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group