ಮೂಡಲಗಿ – ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ ಉಪ್ಪಾರ ಅವರ ನೇತೃತ್ವ ಹಾಗೂ ಡಾ.ರಾಮ್ಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಡಾ|| ಪುನೀತ ರಾಜಕುಮಾರ ಅವರ ಹುಟ್ಟು ಹಬ್ಬದ ಅಂಗವಾಗಿ ಮಾ.17ರಂದು ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿಷ್ಠಾನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತರಿರುವರು ಎಂದು ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ. 9242496497 ಸಂಪರ್ಕಿಸಲು ಕೋರಿದ್ದಾರೆ.