spot_img
spot_img

ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮೇಳ ಹಾಗೂ ಶಾಂತಿ ಮೆರವಣಿಗೆ

Must Read

- Advertisement -

ಚಾಮರಾಜನಗರ-88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವ ಹಾಗೂ ವಿಶ್ವ ಪ್ರಸಿದ್ದ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮೇಳ ಉದ್ಘಾಟನಾ ಸಮಾರಂಭ ಮಾ 6 ರಂದು ಸಂಜೆ 4ಕ್ಕೆ ಪ್ರಮುಖ ಬೀದಿಗಳಲ್ಲಿ ಜಿಲ್ಲೆಯ ರಾಜಯೋಗ ವಿದ್ಯಾರ್ಥಿಗಳಿಂದ  ಶಾಂತಿ ಶೋಭಾ ಯಾತ್ರೆ, 5.30 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ರಾಷ್ಟ್ರ ರಾಜ್ಯ ಸದ್ಭಾವನಾ ಪ್ರಶಸ್ತಿ ಪುರಸ್ಕೖತೆ ರಾಜಯೋಗಿನಿ ಬ್ರಹ್ಮಾಕುಮಾರಿ  ದಾನೇಶ್ವರೀಜೀ ತಿಳಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 88ನೇ ತ್ರಿಮೂರ್ತಿ ಶಿವಜಯಂತಿ  ಮಹೋತ್ಸವ ಹಾಗೂ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮೇಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮೖಸೂರು ಉಪವಲಯದ ಬ್ರಹ್ಮಾಕುಮಾರಿಸ್ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಲಕ್ಷ್ಮೀಜೀ ಅವರು ವಹಿಸಲಿದ್ದಾರೆಂದರು. 

ಕಾರ್ಯಕ್ರಮದ ಉದ್ಘಾಟನೆಯನ್ನು ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜೀ ನೆರವೇರಿಸಲಿದ್ದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಳಿಗಿರಿರಂಗನ ಬೆಟ್ಟದ ವಿಶ್ವಶಾಂತಿನಿಕೇತನ ಆಶ್ರಮದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.

- Advertisement -

ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಶ್ರೀಧರ್, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ್, ತಹಸಿಲ್ದಾರ್ ಐ. ಈ. ಬಸವರಾಜು, ಮಾಜಿ ಶಾಸಕರಾದ ಪರಿಮಳ ನಾಗಪ್ಪ, ಬಾಲರಾಜು, ಭಾಗವಹಿಸಲಿದ್ದಾರೆ. ಕೊಳ್ಳೆಗಾಲ ಬ್ರಹ್ಮಾಕುಮಾರಿಸ್ ಜಿಲ್ಲಾ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಪ್ರಭಾಮಣೀಜೀ ಶಿವ ಜಯಂತಿಯ ಸಂದೇಶ ನೀಡಲಿದ್ದಾರೆ. ಮೇಳದಲ್ಲಿ ವಿಶೇಷವಾಗಿ ಹಾಲೋಗ್ರಾಂ ಲಿಂಗದ ಪ್ರದರ್ಶನವಿರುತ್ತದೆ. ಪ್ರತಿ ನಿತ್ಯ ಬೆಳಗ್ಗೆ ಮತ್ತು ಸಂಜೆ 6.30 ರಿಂದ 8 ರವರೆಗೆ ಸಾರ್ವಜನಿಕರಿಗೆ ಸುಖ ಶಾಂತಿ ಆರೋಗ್ಯಕ್ಕಾಗಿ ಉಚಿತ ಪ್ರವಚನ ನಡೆಯಲಿದೆ ಎಂದು ತಿಳಿಸಿದರು ಗೋಷ್ಠಿಯಲ್ಲಿ ಓಂ ಶಾಂತಿ ನ್ಯೂಸ್ ಸರ್ವಿಸ್ನ ಬಿ. ಕೆ. ಆರಾಧ್ಯ ಹಾಜರಿದ್ದರು.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group