spot_img
spot_img

ಮಕ್ಕಳ ಆರೋಗ್ಯಕ್ಕಾಗಿ ಪೋಲಿಯೋ ಹಾಕಿಸಿ

Must Read

- Advertisement -

ಮೂಡಲಗಿ: ‘ಭಾರತವು ಪೋಲಿಯೋ ಮುಕ್ತವಾಗಿದ್ದು, ಪುನಃ ಮರುಕಳಿಸದಂತೆ ಮುಂಜಾಗೃತ ಕ್ರಮವಾಗಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಹೇಳಿದರು.

ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆರೋಗ್ಯ ಇಲಾಖೆ, ಪುರಸಭೆ, ಶಿಶು ಅಭಿವೃದ್ಧಿ ಇಲಾಖೆ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು ಮೂರು ದಿನಗಳ ವರೆಗೆ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದರು.

ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮಾತನಾಡಿ, ಮಕ್ಕಳು ಆರೋಗ್ಯಪೂರ್ಣವಾಗಿ ಬೆಳೆದರೆ ದೇಶವು ಸದೃಢವಾಗುವುದು. ಪ್ರತಿಯೊಬ್ಬರು ಮಕ್ಕಳ ಆರೋಗ್ಯಕ್ಕೆ ಗಮನ ನೀಡುವುದು ಅವಶ್ಯವಿದೆ ಎಂದರು. 

- Advertisement -

ಅತಿಥಿಗಳು ಮಕ್ಕಳಿಗೆ ಪೋಲಿಯೋ ಲಸಿಕೆ ಹನಿಗಳನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಪುರಸಭೆ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಅಧ್ಯಕ್ಷ ಶ್ರೀಶೈಲ್ ಲೋಕನ್ನವರ, ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಡಾ. ಎಸ್.ಎಸ್. ಪಾಟೀಲ, ಕಾಂಗ್ರೆಸ್ ಅರಭಾವಿ ಮಂಡಲ ಅಧ್ಯಕ್ಷ ಸುರೇಶ ಮಗದುಮ್, ಪುರಸಭೆ ಸದಸ್ಯರಾದ ರವಿ ಮೂಡಲಗಿ, ಶಿವಾನಂದ ಸಣ್ಣಕ್ಕಿ, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸಿದ್ಧಾರೂಢ ಸನದಿ, ಶಿವಾಜಿ ಗೌಳಿ, ಸದಾಶಿವ ಹಂದಿಗುಂದ, ಶಾನೂರ ಚೌಡಪ್ಪಗೋಳ, ಸೀಮಾ ಗುರುನಾಥ ಉಪ್ಪಾರ, ಉದ್ದಪ್ಪ ಭಾಜನ್ನವರ, ಕೃಷ್ಣಪ್ಪ ಸೊನ್ನದ, ರಮೇಶ ಮಾಕನ್ನವರ, ಸಂಜಯ ಮೋಕಾಸಿ, ಶಿವಾನಂದ ಗಾಡವಿ, ಶಿವಾನಂದ ಕಿತ್ತೂರ, ಸುಪ್ರೀತ ಸೋನವಾಲಕರ, ಕೃಷ್ಣಾ ಕೆಂಪಸತ್ತಿ ಇದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group