ಕೊನೆಗೂ ಮನೆ ಬಿಟ್ಟ ರಾಹುಲ್ ಗಾಂಧಿ

Must Read

ಹೊಸದಿಲ್ಲಿ – ಮೋದಿ ಉಪನಾಮದ ಬಗ್ಗೆ ಟೀಕೆ ಮಾಡಿ ಸೂರತ್ ಕೋರ್ಟಿನಿಂದ ಎರಡು ವರ್ಷಗಳ ಶಿಕ್ಷೆ ಹಾಗೂ ಸರ್ಕಾರಿ ಬಂಗಲೆ ಖಾಲಿ ಮಾಡುವ ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ತಮ್ಮ ಸರಂಜಾಮುಗಳೊಂದಿಗೆ ಮನೆ ಖಾಲಿ ಮಾಡಿದರು.

ಈ ಸಂದರ್ಭದಲ್ಲಿ ಪತ್ರಿಕೆಗಳೊಂದಿಗೆಮಾತನಾಡಿದ ಅವರು, ನಾನು ಸರ್ಕಾರದ ವಿರುದ್ಧ ಸತ್ಯ ಹೇಳಿದ್ದಕ್ಕೆ ನನಗೆ ಈ ಶಿಕ್ಷೆ ದೊರಕಿದೆ ಆದರೂ ನನ್ನ ಹೋರಾಟ ನಿಲ್ಲುವುದಿಲ್ಲ ಎಂದರು.

ಈ ಬಗ್ಗೆ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ವಾದ್ರಾ ಮಾತನಾಡಿ, ನನ್ನ ಸಹೋದರ ಹೇಳುವುದು ಸತ್ಯವಾಗಿದೆ ಅವರ ಹೋರಾಟದಲ್ಲಿ ನಾನೂ ಭಾಗಿಯಾಗುತ್ತೇನೆ ಎಂದರು.

ಮೋದಿ ಎಂಬ ಉಪನಾಮ ಹೊಂದಿವರೆಲ್ಲರೂ ಕಳ್ಳರೇ ಯಾಕಿದ್ದಾರೆ ಎಂಬ ಪ್ರಶ್ನೆಯೊಂದಿಗೆ ಒಂದು ಸಮುದಾಯವನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಅವರ ವಿರುದ್ಧ ಮಾನಹಾನಿ ಕೇಸು ದಾಖಲಾಗಿತ್ತು. ಈ ಕೇಸಿನಲ್ಲಿ ಸೂರತ್ ಕೋರ್ಟು ರಾಹುಲ್‌ ಗಾಂಧಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ, ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಿತ್ತು ಈ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕಿತ್ತು. ಇದೇ ದಿ. ೨೨ ರ ತನಕ ವೇಳೆ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಇಂದು ಸರ್ಕಾರಿ ಮನೆಯನ್ನು ಖಾಲಿ ಮಾಡಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group