ಝೂಮ್ ಆ್ಯಪ್ ಮೂಲಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಚಿವ ರಾಜಶೇಖರ ಪಾಟೀಲ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಬೀದರ – ದೇಶದಲ್ಲಿ ಮಹಾಮಾರಿ ಕರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವರು ಹಾಗೂ ಹುಮನಾಬಾದ ಮತ ಕ್ಷೇತ್ರದ ಶಾಸಕ ರಾಜಶೇಖರ ಬಿ ಪಾಟೀಲ್ ಅವರು ಬೆಂಗಳೂರಿನಿಂದ ಝೂಮ್ ಆ್ಯಪ್ ಮುಖಾಂತರ ಎಲ್ಲಾ ತಾಲ್ಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಸಭೆಯಲ್ಲಿ ಶಾಸಕರು ಮಾತನಾಡಿ, ಈ ಸೋಂಕು ಸಮುದಾಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿದೆ  ಈ ಸೋಂಕು ತಡೆಗಟ್ಟಲು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಪೋಲಿಸ್ ಸಿಬ್ಬಂದಿಗಳು ಮತ್ತು ಪುರಸಭೆಯ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯ ಮಾಡಬೇಕು ಮತ್ತು ಜನರಲ್ಲಿ ಈ ಸೋಂಕು ಕುರಿತು ಅರಿವು ಮೂಡಿಸಬೇಕು, ಅಂದರೆ ಜನರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಲು ತಿಳಿಸಬೇಕು ಎಂದು ಹೇಳಿದರು.

- Advertisement -

ಅದೇ ರೀತಿಯಾಗಿ ಜನರು ಈಗಾಗಲೇ ಕರೋನಾ ಸೋಂಕಿನಿಂದ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ, ಇಂತಹ ಸಮಯದಲ್ಲಿ ಜನಸಾಮಾನ್ಯರಿಗೆ ಮೂಲ ಸೌಕರ್ಯಗಳಾದ ನೀರು ಮತ್ತು ವಿದ್ಯುತ್ ನಂತಹ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ  ತಾಲ್ಲೂಕಿನ ಎಲ್ಲಾ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು, ಪೋಲಿಸ್ ಇಲಾಖೆಯ ಅಧಿಕಾರಿಗಳು, ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

- Advertisement -
- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!