ಸಿಂದಗಿ: ಕರ್ನಾಟಕ ರಾಜ್ಯ ತಳವಾರ ನೌಕರರ ಮಹಾಸಭಾದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜು ನರಗೋದಿಯವರನ್ನು ಆಯ್ಕೆ ಮಾಡಲಾಗಿದೆ.
ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಸಿದ್ದರಾಮ ಜೇರಟಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ ತಳವಾರ ಮತ್ತು ರಾಜ್ಯ ಖಜಾಂಚಿ ಅಣ್ಣಾರಾಯ ತಳವಾರ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ತಳವಾರ ನೌಕರರ ರಾಜ್ಯಮಟ್ಟದ ಪದಾಧಿಕಾರಿಗಳ ಆಯ್ಕೆಯನ್ನು ಸಮಾಜದ ಹಿರಿಯರು ಮತ್ತು ವಿವಿಧ ಜಿಲ್ಲೆಯಿಂದ ಆಗಮಿಸಿದ ನೌಕರರ ಸಮ್ಮುಖದಲ್ಲಿ ಸರ್ವಾನುಮತದಿಂದ ಮಾಡಲಾಯಿತು.
ಹಿರಿಯ ಅಧಿಕಾರಿ ರವಿ ಕೊಟಾರಗಸ್ತಿ ಅವರನ್ನು ರಾಜ್ಯಾಧ್ಯಕ್ಷರನ್ಯಾಗಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದು ರಮಗಾ, ರಾಜ್ಯ ಖಜಾಂಚಿಗಳಾಗಿ ಶಂಕರಗೌಡ ಪಾಟೀಲ ಮತ್ತು ರಾಜ್ಯ ಉಪಾಧ್ಯಕ್ಷರಾಗಿ ರಾಜು ನರಗೋದಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.