ಸಾಹಿತಿ, ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Must Read

ಸಾಹಿತಿ, ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣಕರ್ನಾಟಕ ರಾಜ್ಯೋತ್ಸವ ಪ್ರಶಸ್ತ

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಧಾರವಾಡದ ಚೇತನ ಫೌಂಡೇಶನ್ ಹಾಗೂ ಧಾರವಾಡ ಕಲಾವಿದರ ವೇದಿಕೆ ನೀಡುವ ಸುವರ್ಣ ಕರ್ನಾಟಕ ರಾಜ್ಯೋ ತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ಅಧ್ಯಕ್ಷರಾಗಿ 354 ಸಾಹಿತ್ಯ ಕಾರ್ಯಕ್ರಮಗಳ ಸಂಘಟನೆ , ಉದಯೋನ್ಮುಖ ಬರಹಗಾರರ 303 ಸಾಹಿತ್ಯ ಕೃತಿಗಳ ಪ್ರಕಟಣೆ, ಸಾಮೂಹಿಕ ನೇತ್ರದಾನ ಕಾರ್ಯಕ್ರಮದ ಮೂಲಕ ನೇತ್ರದಾನ ಮಾಡಲು ಎಂಟು ಸಾವಿರಕ್ಕೂ ಹೆಚ್ಚು ಜನರ ಮನ ಒಲಿಸುವಿಕೆ , ಐದು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಸಸಿಗಳ ಉಚಿತ ವಿತರಣೆ …ಈ ಸಾಧನೆಗಳನ್ನು ಪರಿಗಣಿಸಿ ಸುವರ್ಣ ಮಹೋತ್ಸವ ಕರ್ನಾಟಕ ರಾಜ್ಯೋತ್ಸವ
ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕನ್ನಡ ಭಾಷೆ ಬಳಸದ ಐದು ನೂರಕ್ಕೂ ಹೆಚ್ಚು ಅನ್ಯ ಭಾಷಾ ಫಲಕಗಳ ಬಗ್ಗೆ ದೂರು ಸಲ್ಲಿಕೆ, ಕನ್ನಡ ಭಾಷೆ ಬಳಸದ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ದೂರು , ಐದು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಕನ್ನಡ ನಾಡು – ನುಡಿಯ ಮಹತ್ವ ಕುರಿತು ಉಪನ್ಯಾಸ ,ಆಯ್ದ ಶಾಲಾ ಕಾಲೇಜುಗಳಿಗೆ ಜ್ಞಾನ ಪೀಠ ಪ್ರಶಸ್ತಿ ವಿಜೇತ ಕನ್ನಡ ಭಾವ ಚಿತ್ರಗಳ ನೀಡಿಕೆ ಮಾಡುವ ಮೂಲಕ ಸಾಹಿತಿ ಭೇರ್ಯ ರಾಮಕುಮಾರ್ ಸುವರ್ಣ ಕರ್ನಾಟಕಕ್ಕೆ ತಮ್ಮದೇ ಅದ ಮಹತ್ವದ ಕೊಡುಗೆ ನೀಡಿದ್ದಾರೆ.ಈ ಕೊಡುಗೆಗಳನ್ನು ಪರಿಗಣಿಸಿ ಭೇರ್ಯ ರಾಮಕುಮಾರ್ ಅವರನ್ನು ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಚೇತನ ಫೌಂಡೇಶನ್ ಪ್ರಕಟಣೆ ತಿಳಿಸಿದೆ.

ಇವರ ಕನ್ನಡ ನಾಡು ನುಡಿ ಸೇವೆಯನ್ನು ಗುರುತಿಸಿ 2022 ರ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2023 ರಲ್ಲಿ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಗಿದೆ.

ಮುಂಬರುವ ಡಿಸೆಂಬರ್ 15 ರಂದು ಧಾರವಾಡದಲ್ಲಿ ನಡೆಯುವ ಸುವರ್ಣ ಮಹೋತ್ಸವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಗುವುದು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group