ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.
ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಬಸಗೌಡ ಪಾಟೀಲ, ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಕರ್ನಾಟಕ, ಕನ್ನಡ ಭಾಷೆ ತನ್ನದೇ ಆದ ಹಿರಿಮೆ-ಗರಿಮೆಯನ್ನು ಹೊಂದಿದೆ ಎಂದು ಹೇಳಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ಹನಗಂಡಿ, ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯ ಎ.ಆರ್.ಪಾಟೀಲ, ಪ್ರಾಥಮಿಕ ವಿಭಾಗದ ರಾಜು ಉಪ್ಪಾರ, ಆಂಗ್ಲ ಮಾಧ್ಯಮ ವಿಭಾಗದ ಶ್ರೀಮತಿ ಮೋಬಿನಾ ಶೇಖ್, ದೈಹಿಕ ನಿರ್ದೇಶಕ ಬಿ.ಕೆ. ಸೊಂಟನವರ, ದೈಹಿಕ ಶಿಕ್ಷಕ ಬಿ.ಎಂ. ಡಬ್ಬನವರ, ವಿವಿಧ ವಿಭಾಗಳ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.