- Advertisement -
ಮೈಸೂರು-ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ನ.೧ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ, ನಾಡಗೀತೆಗಳನ್ನು ಹಾಡಿ, ರಾಷ್ಟ್ರ ಕ್ಕೂ ಹಾಗೂ ನಾಡಿಗೂ ಗೌರವವನ್ನು ಸಲ್ಲಿಸುವುದರ ಮೂಲಕ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಟಿ.ರಂಗಪ್ಪ, ಆಡಳಿತಾಧಿಕಾರಿ ಶ್ರೀಮತಿ ಕಾಂತಿನಾಯಕ್, ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಸುನಿಲ್‌ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.