spot_img
spot_img

ರಾಜ್ಯೋತ್ಸವ ನಿಮಿತ್ತ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Must Read

ಸಿಂದಗಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನ.12 ರಂದು ಸಾಯಂಕಾಲ 4 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಲರವ  ಕಾರ್ಯಕ್ರಮ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ಕನ್ನಡದ ಬಳಕೆಯಲ್ಲಿ ಪ್ರಾಶಸ್ತ್ಯ ಪಡೆದ ಶಾಲೆಗೆ ಉತ್ತಮ ಶಾಲೆ ಪ್ರಶಸ್ತಿ, 21-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು.

ಅಲ್ಲದೆ ರಸಪ್ರಶ್ನೆ, ಶುದ್ಧ ಓದು ಬರಹ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ. 12 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಲಾಗುವುದು ಕಾರಣ ಸಾಧಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದು ಕಸಾಪ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಾರ್ಯಕ್ರಮದಲ್ಲಿ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರ   ಸಾನ್ನಿಧ್ಯದಲ್ಲಿ ಶಾಸಕ ರಮೇಶ ಭೂಸನೂರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಚನ್ನಪ್ಪ ಕಟ್ಟಿ ಅವರು ಸಾಂಸ್ಕೃತಿಕ ಕಲವರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಾಜಿ ಶಾಸಕ ಶರಣಪ್ಪ ಸುಣಗಾರ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಮುಖಂಡ ಶಿವಾನಂದ ಪಾಟೀಲ (ಸೋಮಜ್ಯಾಳ) ತಾಯಿ ಭುವನೇಶ್ವರಿ ಭಾವಚಿತ್ರದ ಪೂಜೆ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಅಶೋಕ ಶಾಬಾದಿ, ಕಾಂಗ್ರೆಸ್ ಮುಖಂಡ ಮಹಿಬೂಬ ತಾಂಬೋಳಿ, ಅನೀಲಗೌಡ ಬಿರಾದಾರ ಅವರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಪುರಸಭೆ ಸದಸ್ಯರು, ಸಾಹಿತ್ಯಾಭಿಮಾನಿಗಳು, ಕವಯತ್ರಿಯರು ವೇದಿಕೆಯಲ್ಲಿ ಉಪಸ್ಥಿತರಿರುವರು.

ಪತ್ರಿಕಾ ಅಂಕಣಕಾರ ಮಂಜುನಾಥ ಜುನಗೊಂಡ ಅವರು ಉಪನ್ಯಾಸ ನೀಡಲಿದ್ದಾರೆ ಕಾರಣ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮಾಧ್ಯಮ ಪ್ರತಿನಿಧಿ ಪಂಡಿತ ಯಂಪೂರೆ ವಿನಂತಿಸಿದ್ದಾರೆ,

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!