ಸಿಂದಗಿ: ರಕ್ಷಾ ಬಂಧನ ರಕ್ಷೆ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬ ಎರಡು ಪದಗಳಿಂದ ಕೂಡಿದೆ. ಪ್ರಸ್ತುತ, ಈ ಹಬ್ಬವು ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧದ ಸಮಾನಾರ್ಥಕವಾಗಿದೆ. ಮನೆಯಲ್ಲಿ ಒಬ್ಬಳೇ ಹೆಣ್ಣು ಮಗಳಿದ್ದರೆ ಅಥವಾ ಸಹೋದರನನ್ನು ಹೊಂದಿರದಿದ್ದರೆ ಸಾಮಾನ್ಯವಾಗಿ ಸೋದರ ಸಂಬಂಧಿ ಅಥವಾ ಅವಳು ತನ್ನ ಸಹೋದರ ಎಂದು ಹೇಳಿಕೊಳ್ಳುವ ಯಾರೊಂದಿಗಾದರೂ ಆಚರಣೆಗಳನ್ನು ಮಾಡುತ್ತಾರೆ. ಈ ಹಬ್ಬವು ಒಡಹುಟ್ಟಿದವರು ಒಟ್ಟಿಗೆ ಬೆಳೆಯುವ ಮಹತ್ವವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ ಎಂದು ನಾಗರತ್ನಾ ಮನಗೂಳಿ ಹೇಳಿದರು.
ಪಟ್ಟಣದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿ, ಇದು ಸಹೋದರಿ ಮತ್ತು ಸಹೋದರರ ನಡುವಿನ ಪ್ರೀತಿಯನ್ನು ತೋರಿಸುತ್ತದೆ. ಮತ್ತೊಂದು ಘಟನೆಯಲ್ಲಿ ಚಿತ್ತೂರಿನ ರಾಣಿ ಕರ್ಣಾವತಿಯು ಗಂಡನನ್ನು ಕಳೆದುಕೊಂಡು ವೈಧವ್ಯದ ಜೀವನ ನಡೆಸುತ್ತಿದ್ದಳು. ಆಗ ಆಕೆಯು ಚಕ್ರವರ್ತಿ ಹುಮಾಯುನನಿಗೆ ರಾಖಿಯನ್ನು ಕಳುಹಿಸಿದಳು. ಇದಕ್ಕೆ ಕಾರಣ ಚಕ್ರವರ್ತಿ ಬಹದ್ದೂರ್ ಈಕೆಯ ರಾಜ್ಯದ ಮೇಲೆ ದಂಡೆತ್ತಿ ಬರುವ ನಿರ್ಧಾರಕ್ಕೆ ಬಂದಿದ್ದನು. ಆಗ ಆಕೆಯು ಹುಮಾಯೂನನ ಸಹಾಯವನ್ನು ಬಯಸಿ ರಾಖಿಯನ್ನು ಕಳುಹಿಸಿದ್ದಳು.ಇದನ್ನು ಮುಟ್ಟುವ ಮೂಲಕ ಸ್ವೀಕರಿಸಿದ ಹುಮಾಯೂನನು ತನ್ನ ಸೇನೆಯನ್ನು ರಾಣಿ ಕರ್ಣಾವತಿಯ ಸಹಾಯಕ್ಕೆ ಧಾವಿಸುವಂತೆ ಸೂಚಿಸಿದನು ಅದಕ್ಕೆ ಪ್ರತಿ ಸಹೋದರಿಯು ಪ್ರತಿವರ್ಷ ತನ್ನ ಸಹೋದರರ ಮಣಿಕಟ್ಟಿನ ಮೇಲೆ ‘ರಾಖಿ’ ಎಂದು ಕರೆಯಲ್ಪಡುವ ಪವಿತ್ರ ದಾರವನ್ನು ಕಟ್ಟಲು ಕಾಯುತ್ತಾಳೆ ಎಂದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಈ ದಿನ, ಸಹೋದರಿ ತನ್ನ ಸಹೋದರರ ಮಣಿಕಟ್ಟಿನ ಮೇಲೆ ಕಟ್ಟುವ ರೇಷ್ಮೆ ದಾರವು ಕೇವಲ ಒಂದು ದಾರವಲ್ಲ. ಅದು ಇಬ್ಬರ ನಡುವಿನ ಶುದ್ಧ, ಪವಿತ್ರ ಮತ್ತು ನಿರಂತರ ಪ್ರೀತಿಯ ಗುರುತು, ಜೊತೆಗೆ ಶಾಶ್ವತ ರಕ್ಷಣೆಗಾಗಿ ಮಂತ್ರದೊಂದಿಗೆ ಬೆರೆತಿದೆ. ಸಹೋದರಿ ಮದುವೆಯಾದಾಗಲೂ, ಸಹೋದರಿಯರ ಮನೆಗೆ ಭೇಟಿ ನೀಡಿ ಆಕೆಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದನ್ನು ಮರೆಯುವುದಿಲ್ಲ. ಸಹೋದರನಿಗೆ ಕಟ್ಟಲು ರಾಖಿಯನ್ನು ಆಯ್ಕೆ ಮಾಡುವ ವಿಚಾರದಲ್ಲೂ ಸಮಾನಾರ್ಥಕವಾಗಿದೆ ಮತ್ತು ಇದು ಸಹೋದರಿ ಮತ್ತು ಸಹೋದರರ ನಡುವಿನ ಪ್ರೀತಿಯನ್ನು ಬಲಪಡಿಸುವ ಮತ್ತು ಪುನರುಚ್ಚರಿಸುವ ಉತ್ಸವವಾಗಿದೆ ಎಂದು ಹೇಳಬಹುದು. ಒಂದು ಕಡೆ, ಸಹೋದರನು ತನ್ನ ಸಹೋದರಿಯನ್ನು ನೋಡಿಕೊಳ್ಳುವುದಾಗಿ ಮತ್ತು ತನ್ನ ಜೀವನಪರ್ಯಂತ ಅವಳನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ. ಮತ್ತೊಂದೆಡೆ, ಸಹೋದರಿ ತನ್ನ ಸಹೋದರನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾಳೆ. ರಕ್ಷಾಬಂಧನದ ಮಹತ್ವ, ಪ್ರಾಮುಖ್ಯತೆ ರಕ್ಷಾಬಂಧನಕ್ಕೆ ಭಾರತದಲ್ಲಿ ಹೆಚ್ಚು ಮಹತ್ವವಿದೆ ಎಂದು ವಿವರಿಸಿದರು.
ಬೆಳಗಾವಿ ಈಶ್ವರಿಯ ವಿವಿಯ ರಾಜಯೋಗಿನಿ ಬ್ರಹ್ಮಕುಮಾರಿ ಅಂಬಿಕಾ ಅಕ್ಕಾಜಿ ಮಾತನಾಡಿ, ರಕ್ಷಾ ಬಂಧನವು ಪ್ರೀತಿ ಮತ್ತು ರಕ್ಷಣೆಯ ದಿನವಾಗಿದೆ. ಈ ದಿನವನ್ನು ಮುಖ್ಯವಾಗಿ ಒಡಹುಟ್ಟಿದವರ ನಡುವೆ ಪರಸ್ಪರ ಪ್ರೀತಿ ಮತ್ತು ವಾತ್ಸಲ್ಯವನ್ನು ನೀಡಲು ಆಚರಿಸಲಾಗುತ್ತದೆ. ಸಹೋದರಿಯರು ತನ್ನ ಸಹೋದರನಿಗೆ ರಾಖಿ ಕಟ್ಟುತ್ತಾರೆ ಮತ್ತು ಅವನ ಯೋಗಕ್ಷೇಮಕ್ಕಾಗಿ ದೇವರನ್ನು ಪ್ರಾರ್ಥಿಸುತ್ತಾರೆ ಮತ್ತು ಸಹೋದರನು ಅವಳನ್ನು ದುಷ್ಟರಿಂದ ರಕ್ಷಿಸಲು ಪ್ರತಿಜ್ಞೆ ಮಾಡುತ್ತಾನೆ. ಭಾರತದಲ್ಲಿ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನ. ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 15ರಂದು ರಕ್ಷಾಬಂಧನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಈಶ್ವರಿಯ ವಿವಿಯ ಸಂಚಾಲಕಿ ಪವಿತ್ರಾಜಿ ಅಕ್ಕಾ, ಸಿ.ಎಂ.ಮನಗೂಳೀ ಕಾಲೇಜಿನ ಪ್ರಾಚಾರ್ಯ ಬಿ.ಜಿ.ಪಾಟೀಲ ಹಾಗೂ ಸಿಬ್ಬಂದಿ ಇದ್ದರು.