ಬೂದಿಹಾಳ ಪ್ರೌಢಶಾಲೆಯ ರಕ್ಷಾ ಬಾರ್ಕಿ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
281

ಬೈಲಹೊಂಗಲ: ವೀರರಾಣಿ ಕಿತ್ತೂರು ಚನ್ನಮ್ಮಾಜಿಯ 200 ನೇ ವಿಜಯೋತ್ಸವದ ನಿಮಿತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರಕ್ಷಾ ಯಲ್ಲಪ್ಪ ಬಾರ್ಕಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ರೇಖಾ ಸೊರಟೂರ, ಹೇಮಲತಾ ಪುರಾಣಿಕ, ಮಂಜುಳಾ ಕಾಳಿ, ಕುಮಾರಯ್ಯ ಯರಗಂಬಳಿಮಠ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.