spot_img
spot_img

ರಾಮಲಿಂಗೇಶ್ವರ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Must Read

ಬೈಲಹೊಂಗಲ: ತಾಲೂಕಿನ ಉಡಿಕೇರಿಯ ಶ್ರೀ ರಾಮಲಿಂಗೇಶ್ವರ ಪ್ರೌಢಶಾಲೆಯ 2021-22 ನೇ ಸಾಲಿನ ಎಸ್.ಎಸ್. ಎಲ್. ಸಿ. ಫಲಿತಾಂಶವು ಶೇ 100 ರಷ್ಟಾಗಿದೆ. ಪೂಜಾ ದೊಡ್ಲಿ 616 (98.56%) ಪ್ರಥಮ, ಚಂದ್ರು ಲಿಂಗದಳ್ಳಿ 610 (97.60%) ದ್ವಿತೀಯ, ಮಹೇಶಕುಮಾರ ಪಠಾಣಿ ಹಾಗೂ ರಿಯಾಜ್ ದರಗಾದ 607 (97.12%) ತೃತೀಯ ಸ್ಥಾನ ಗಳಿಸಿದ್ದಾರೆ. ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 28 ವಿದ್ಯಾರ್ಥಿಗಳು ಪ್ರಥಮ ವರ್ಗ, 1 ವಿದ್ಯಾರ್ಥಿ ದ್ವಿತೀಯ ವರ್ಗದಲ್ಲಿ ಉತ್ತೀರ್ಣರಾಗಿದ್ದಾರೆ. ಕನ್ನಡ ವಿಷಯದಲ್ಲಿ 2, ಹಿಂದಿಯಲ್ಲಿ 7, ಗಣಿತ 4, ಸಮಾಜವಿಜ್ಞಾನ ವಿಷಯದಲ್ಲಿ 6 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ರಾಜು ಬೋಳಶೆಟ್ಟಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯ, ಶಿಕ್ಷಕ ಸಿಬ್ಬಂದಿ ವರ್ಗ, ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!