spot_img
spot_img

ರಮೇಶ ದೆಹಲಿ ಭೇಟಿ ಅವರ ಆಂತರಿಕ ವಿಚಾರ – ಸತೀಶ ಜಾರಕಿಹೊಳಿ

Must Read

- Advertisement -

ಬೆಳಗಾವಿ : ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನುಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ಅದು ಅವರ ಪಕ್ಷದ ಆಂತರಿಕ ವಿಚಾರ. ನಾವೇನೂ ಹೇಳಲಿಕ್ಕೆ ಬರುವುದಿಲ್ಲ. ಅದಕ್ಕೂ ನಮಗೂ ಸಂಬಂಧವಿಲ್ಲವೆಂದರು.

- Advertisement -

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಗೊಂದಲಕ್ಕೆ ಸಂಬಂಧ ಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸತೀಶ ಅವರು, ನಾಯಕತ್ವ ಎಂಬುದು ಮುಗಿದು ಹೋಗಿದೆ. ಮುಖ್ಯಮಂತ್ರಿ ಯಾರು ಎಂಬುದು 2023 ಮೇ ತಿಂಗಳ ಅಂತ್ಯಕ್ಕೆ ತಿಳಿಯಲಿದೆ. ಈಗ ಚರ್ಚೆ ಮಾಡುವುದು ಅನವಶ್ಯಕ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿನ ಗೊಂದಲ ಪರಿಹಾರ ಮಾಡುವುದಕ್ಕೆ ವರಿಷ್ಠ ನಾಯಕರು ಇದ್ದಾರೆ. ಅವರು ಗಮನಿಸುತ್ತಾರೆ. ಇದರ ಮಧ್ಯೆ ನಾವು ಪ್ರವೇಶ ಮಾಡುವುದಿಲ್ಲ ಎಂದರು.

- Advertisement -
- Advertisement -

Latest News

ಜಲ ಜೀವನ ಮಿಷನ್ ಅಡಿಯಲ್ಲಿ ಕಲ್ಯಾಣಿ ಪುನಶ್ಚೇತನ

ಮೂಡಲಗಿ: ಜಿಲ್ಲಾ ಪಂಚಾಯತ್ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ, ತಾಲೂಕು ಪಂಚಾಯತ್ ಮೂಡಲಗಿ, ಗ್ರಾಮ ಪಂಚಾಯತ್ ಯಾದವಾಡ ಹಾಗೂ ಅನುಷ್ಠಾನ ಬೆಂಬಲ...
- Advertisement -

More Articles Like This

- Advertisement -
close
error: Content is protected !!
Join WhatsApp Group