ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಬಿ.ಎ ದ್ವಿತೀಯ ವರ್ಷದ ವಿದ್ಯಾರ್ಥಿ, ಎನ್.ಎಸ್.ಎಸ್. ಸ್ವಯಂಸೇವಕ ಕು. ಶಿವನಾಯ್ಕ ಅವರಾದಿ ಅವರು ಇತ್ತೀಚೆಗೆ ಕಾಗವಾಡದ ಶಿವಾನಂದ ಕಾಲೇಜಿನಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಯುನಿವರ್ಸಿಟಿ ಬ್ಲೂ ಆಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾನೆ.
ನವೆಂಬರ್ ತಿಂಗಳಲ್ಲಿ ತಮಿಳುನಾಡು ರಾಜ್ಯದ ಕಾಂಚಿಪುರಂನ ಎಸ್.ಆರ್.ಎಂ. ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಸ್ವಾಯತ್ತ ವಿಶ್ವವಿದ್ಯಾಲಯದಲ್ಲಿ ಜರುಗಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕಬಡ್ಡಿ ಸ್ಪರ್ಧೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾನೆ.
ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಚೇರಮನ್ನರಾದ ಬಸಗೌಡ ಶಿ. ಪಾಟೀಲ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ಹನಗಂಡಿ, ದೈಹಿಕ ನಿರ್ದೇಶಕ ಬಿ.ಕೆ. ಸೊಂಟನವರ, ಕ್ರೀಡಾ ಕಾರ್ಯದರ್ಶಿ ಬಿ.ಬಿ. ವಾಲಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶಂಕರ ನಿಂಗನೂರ, ಕಾಲೇಜಿನ ಬೋಧಕ/ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.