spot_img
spot_img

ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ರಾಣಿ ಚೆನ್ನಮ್ಮ

Must Read

spot_img
- Advertisement -

(ಅಕ್ಟೋಬರ್ 23,24 ಮತ್ತು 25 ರಂದು ಕಿತ್ತೂರು ಉತ್ಸವ. ತನ್ನಿಮಿತ್ತ ಈ ಬರಹ)

ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ, ಬ್ರಿಟಿಷರ ವಿರುದ್ಧ ದಂಗೆ ಎದ್ದಂತ ಮೊದಲ ಮಹಿಳೆ ಕಿತ್ತೂರು ಚೆನ್ನಮ್ಮ. ಭಾರತೀಯ ಇತಿಹಾಸ ಎಂದೂ ಮರೆಯಲಾಗದು. ಪ್ರಪಂಚದ ಬಲಾಢ್ಯ ವಸಾಹತುಶಾಹಿ ಶಕ್ತಿಗೆ ಸವಾಲು ಹಾಕಿ ಸ್ವಾತಂತ್ರ್ಯ ಉತ್ಕಟತೆ ಪ್ರದರ್ಶಿಸುವ ಮೂಲಕ ಚರಿತ್ರೆಯಲ್ಲಿ ಹಿರಿಮೆ ಮೆರೆದ ಸ್ವಾಭಿಮಾನದ ಬೀಡು ಈ ಕಿತ್ತೂರು.

ಈ ನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವ, ಸ್ವಾತಂತ್ರ್ಯಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರವನ್ನೆರಿಸಿತು.

- Advertisement -

ವಿಜಾಪುರವು ಪತನದ ನಂತರ ಕಿತ್ತೂರು ದೇಸಾಯಿಗಳು ತಮ್ಮ ರಕ್ಷಣೆಗಾಗಿ ಅನೇಕ ಯುದ್ಧಗಳನ್ನು ಎದುರಿಸಬೇಕಾಯಿತು. ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಚಿಂತಾಜನಕವಿತ್ತು. ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಗಾರರು  ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿದ್ದವು. ಈ ಸಮಯದಲ್ಲಿ ಮಲ್ಲಸರ್ಜ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರಗೊಳಿಸಿದ್ದನು.  ೧೮೧೬ರಲ್ಲಿ ಮಲ್ಲಸರ್ಜನು ಕೊನೆಯುಸಿರನ್ನೆಳೆದ. ಅವನ ಮಗ ಶಿವಲಿಂಗ ರುದ್ರಸರ್ಜನು ಮರಾಠಾ ಹಾಗು ಟಿಪ್ಪು ಸುಲ್ತಾನ ಇವರ ಕಿರಿಕಿರಿ ತಪ್ಪಿಸಲು ಬ್ರಿಟಿಷರ ಜೊತೆಗೆ ಸ್ನೇಹದಿಂದಿದ್ದ. ಆದರೆ ಕಾಣಿಕೆ ಕೊಡುವ ಕರಾರಿನ ಮೇಲೆ ಬ್ರಿಟಿಷರು ಈ ದೊರೆಗೆ ಸನ್ನದು ನೀಡಿದರು. ಶಿವಲಿಂಗರುದ್ರ ಸರ್ಜನು ೧೮೨೪ ರಂದು ವಾರಸದಾರರಿಲ್ಲದೆ ತೀರಿಕೊಂಡನು.

ಶಿವಲಿಂಗರುದ್ರಸರ್ಜನ ಮಲತಾಯಿ ಚೆನ್ನಮ್ಮ!

ಚೆನ್ನಮ್ಮ ಜನಿಸಿದ್ದು ೧೭೭೮ರಲ್ಲಿ. ಬೆಳಗಾವಿಯ ಕಾಕತಿ ಹುಟ್ಟೂರು. ತಂದೆ  ದೇಸಾಯಿ ಧೂಳಪ್ಪಗೌಡರು. ಚನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು.

ಕಿತ್ತೂರಿನ ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ, ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದಳು. ಆದರೆ ಬ್ರಿಟಿಷರು ಕಿತ್ತೂರಿನ ಒಡೆತನವನ್ನೆ ಅಪೇಕ್ಷಿಸಿದರು.

- Advertisement -

ಅಕ್ಟೋಬರ ೧೮೨೪ರಂದು ಥ್ಯಾಕರೆ ಕಿತ್ತೂರಿಗೆ ಬಂದನು. ೨೩ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳಳುತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದ.  ಬ್ರಿಟಿಷರು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕೋಟೆಯನ್ನು ಒಡೆಯಲು ಪ್ರಾರಂಭಿಸಿದರು. ಡಿಸೆಂಬರ್ ೫ ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಮತ್ತು ಜಾನಕಿಬಾಯಿಯರ ಜೊತೆಗೆ ಕೈದಿಯಾದಳು.

ಇತ್ತ ರಾಯಣ್ಣನ ಹೋರಾಟ ಮುಂದುವರೆದಿರುತ್ತದೆ. ವಿಶ್ವಾಸದ್ರೋಹಿಗಳು ಇವನ ಸಂಗಡಿಗರಂತೆ ನಟಿಸುತ್ತ ೧೮೩೦ ಫೆಬ್ರುವರಿಯಲ್ಲಿ ಇವನನ್ನು ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಬಂದಿಯಾಗಿದ್ದ ಚನ್ನಮ್ಮ ಜೈಲಿನಲ್ಲಿ ತೀರಿಕೊಳ್ಳುತ್ತಾಳೆ.

ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ, ಬ್ರಿಟಿಷರ ವಿರುದ್ಧ ದಂಗೆ ಎದ್ದಂತ ಮೊದಲ ಮಹಿಳೆ ಕಿತ್ತೂರು ಚೆನ್ನಮ್ಮ.

ಕಿತ್ತೂರ ಚನ್ನಮ್ಮ ಈ ನಾಡು ಕಂಡಿರುವಂತಹ ಅಪರೂಪ ಚೇತನ. ಈ ನಾಡಿಗಾಗಿ-ನಾಡವರಿಗಾಗಿ ಚನ್ನಮ್ಮನ ಕೊಡುಗೆ ಅಪಾರವಾದದ್ದು.


ಶ್ರೀಮತಿ ಮಂಜುಳಾ ಹಿರೇಮಠ ಕಲ್ಲೋಳಿ

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group