ಸಿಂದಗಿ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಗುಂಪು ಆಟಗಳಲ್ಲಿ ಬಾಲಕರ ಖೋಖೋ ಪ್ರಥಮ, ಬಾಲಕರ ವ್ಹಾಲಿಬಾಲ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ವ್ಹಾಲಿಬಾಲ್ ದ್ವಿತೀಯ, ಬಾಲಕಿಯರ ಖೋಖೋ ದ್ವಿತೀಯ, ಬಾಲಕರ ಹಾಗೂ ಬಾಲಕಿಯರ ಟೆನಿಕ್ವಾಯಿಟ್ ದ್ವಿತೀಯ ಸ್ಥಾನಗಳನ್ನು ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ೩೦ ಜನ ವಿದ್ಯಾರ್ಥಿಗಳು ಸಮಗ್ರ ವೀರಾಗ್ರಣೆ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾಧವ, ಸುನೀಲ ಪಾಟೀಲ, ಎನ್.ಬಿ.ಪೂಜಾರಿ, ಪ್ರಸನ್ನ ಜೋಗೂರ, ಎಸ್.ಎಸ್.ತಾಳಿಕೋಟಿ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ರಾಹುಲ ನಾರಾಯಣಕರ್, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ಸ್ನೇಹಾ ಕುಲಕರ್ಣಿ, ಸ್ನೇಹಾ ಧರಿ, ಲಕ್ಷ್ಮಿ ಕನ್ನೋಳ್ಳಿ, ಎಸ್.ಎಸ್.ಹೂಗಾರ, ರಾಹುಲ ದಾಸರ್, ಐ.ಎಸ್.ಸಿಂಪಗೇರ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.