ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಸಭೆ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಮುನ್ಯಾಳ ಸದಾಶಿವಮಠದಲ್ಲಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ

ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವ ಯೋಗೀಶ್ವರಮಠದಲ್ಲಿ ಹಣಮಂತದೇವರ ಮಂದಿರ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಶ್ರೀ ಗುರು ಬಸವರಾಜ ಅಜ್ಜನವರ ಸರ್ಕಲ್ ಉದ್ಘಾನೆಯು ದಿ. 7ರಂದು ಸಂಜೆ 4ಕ್ಕೆ ಜರುಗಲಿದೆ.

ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು. ಸದಾಶಿವಯೋಗಿಶ್ವರಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

ಗೋಕಾಕದ ಶೂನ್ಯಸಂಪಾದನ ಮಠದ ಮುರಘರಾಜೇಂದ್ರ ಸ್ವಾಮೀಜಿ, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಚಿಕ್ಕೊಪ್ಪದ ವೀರಭದ್ರ ಸ್ವಾಮೀಜಿ, ಬಬಲಾದಿ ಹಿರೇಮಠದ ಓಂಕಾರೇಶ್ವರ ಸ್ವಾಮೀಜಿ, ಅರಕೇರಿಯ ಅವದೂತ ಸಿದ್ದಮಹಾರಾಜ, ಜೋಡಕುರಳಿಯ ಚಿದಾನಂದ ಭಾರತಿ, ಇಟನಾಳದ ಸಿದ್ಧೇಶ್ವರ ಶರಣರು, ಮುನ್ಯಾಳದ ಲಕ್ಷ್ಮಣದೇವರು ಭಾಗವಹಿಸುವರು.

ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮ: ನ. 6ರಂದು ಬೆಳಿಗ್ಗೆ ಗದ್ದುಗೆಗೆ ಮಹಾ ರುದ್ರಾಭೀಷಕ, ಬಿಲ್ವಾರ್ಚನೆ ಇರುವುದು.

ಸಂಜೆ ನಡೆಯುವ ಧರ್ಮಸಭೆಯ ಮುಂಚೆ ಜಗದ್ಗುರುಗಳು ಮತ್ತು ಆಗಮಿಸುವ ಎಲ್ಲ ಪೂಜ್ಯರನ್ನು ಕುಂಭ, ಆರತಿ ಮತ್ತು ಸಕಲ ವಾದ್ಯ ವೈಭವದೊಂದಿಗೆ ಶ್ರೀಮಠಕ್ಕೆ ಬರಮಾಡಿಕೊಳ್ಳುವರು. ರಾತ್ರಿ 9 ಕ್ಕೆ ಸಾಮಾಜಿಕ ನಾಟಕ ಪ್ರದರ್ಶನ ಇರುವುದು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!