ಮಹಾಶಿವರಾತ್ರಿ ನಿಮಿತ್ತ ಶಿವಸ್ಮರಣೆ ಹಾಗೂ ಬಿಲ್ವಾರ್ಚನೆ

Must Read

ಸಿಂದಗಿ; ಫೇ ೨೬ ರಂದು ಮಹಾಶಿವರಾತ್ರಿ ನಿಮಿತ್ತ ಶಿವ ಸ್ಮರಣೆ ಹಾಗೂ ದಶಲಕ್ಷ ಬಿಲ್ವಾರ್ಚನೆ ಹಮ್ಮಿಕೊಳ್ಳಲಾಗಿದೆ ಕಾರಣ ಸುತ್ತಮುತ್ತಲಿನ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಪುನೀತರಾಗುವಂತೆ ಆದಿಶೇಷ ಸಂಸ್ಥಾನ ಹಿರೇಮಠದ ಶ್ರೀ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ರೂಪರೇಷಗಳ ಕುರಿತು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಸಾಯಂಕಾಲ ೬ ಗಂಟೆಯಿಂದ ಬೆಳಗಿನ ೬ ಗಂಟೆಯವರೆಗೆ ಶಿವ ಸ್ಮರಣೆ ಹಾಗೂ ದಶಲಕ್ಷ ಬಿಲ್ವಾರ್ಚನೆ ಮತ್ತು ಅಹೋರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಕಲಾವಿದರಿಂದ ಸಂಗೀತ ಸುಧೆ ಉಣಬಡಿಸಲಿದ್ದಾರೆ. ಅಲ್ಲದೆ ಆ ದಿನದಂದು ಉಪವಾಸ ಇದ್ದವರಿಗೆ ಸಿಹಿ ತಿನಿಸುಗಳು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group