ಸಿಂದಗಿ– ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಬಾಲಕರ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ರೇಣುಕಾ ಸಂಗಮೇಶ್ವರ ಕಾರಜೋಳ ಅವರಿಗೆ ಧಾರವಾಡ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ಕಾರಜೋಳ ಅವರು ಡಾ. ಸಿ.ಎಮ್.ಅಡಕಿ ಅವರ ಮಾರ್ಗದರ್ಶನದಲ್ಲಿ ರಚಿಸಿದ ನಯಿ ಸದಿಕೆ ಪ್ರಥಮ ದಶಕೆ ಉಪನ್ಯಾಸದ ವಿವಿಧ ಆಯಾಮ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿದೆ.
ಅವರಿಗೆ ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಮತ್ತು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು ಮತ್ತು ವಿವಿಧ ಅಂಗ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.