ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ

Must Read

ಮೂಡಲಗಿ: ಪಟ್ಟಣದ ಜಾತಗಾರ ಪ್ಲಾಟದಲ್ಲಿನ 401 ಸಂಖ್ಯೆಯ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು.

ಇದೇ ವೇಳೆ ಸ್ಥಳೀಯ ನಿವಾಸಿ ಇಬ್ರಾಹಿಂ ಹುಣಶ್ಯಾಳ ಮಾತನಾಡಿ, ಈಗಿರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿರುವುದರಿಂದ ಹಾಗೂ ಕೇಂದ್ರದ ಸುತ್ತಮುತ್ತ ಗಲಿಜು ಇರುವುದರಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಅದರಿಂದ ತಾವುಗಳು ಜಾಗ ನೀಡಬೇಕೆಂದು ಪುರಸಭೆ ಮುಖ್ಯಾಧಿಕಾರಿಗಳಲ್ಲಿ ಮನವಿ ಮಾಡಿಕೊಡರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಕಲಾವತಿ ನಂದಗಾವಮಠ, ಸ್ಥಳೀಯ ನಿವಾಸಿಗಳಾದ ಹುಸೇನಸಾಬ್ ಶೇಖ, ಅಬ್ದುಲ್ ಮದಭಾವಿ, ಹಜರತ್ ಶೇಖ, ಇನು ನಾಗರಾಳ, ಹಾಜಿಸಾಬ್ ಶೇಖ, ರಫೀಕ್ ಕತ್ತನಳಿ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group