spot_img
spot_img

ಕುಮಾರಸ್ವಾಮಿಗೆ ಅವಮಾನ : ಎಡಿಜಿಪಿ ಚಂದ್ರಶೇಖರ ವಿರುದ್ಧ ಕ್ರಮಕ್ಕೆ ಆಗ್ರಹ

Must Read

- Advertisement -

ಸಿಂದಗಿ; ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಪತ್ರದ ಮೂಲಕ ಹಂದಿಗೆ ಹೋಲಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ ಐಟಿ)ದ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಗೌರಾನ್ವಿತ ರಾಜ್ಯಪಾಲರಿಗೆ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ರವರ ಮೂಲಕ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬಿರಾದಾರ, ತಾಲೂಕು ಅಧ್ಯಕ್ಷ ಎಂ.ಎನ್.ಪಾಟೀಲ, ಆಲಮೇಲ ಘಟಕದ ಅಧ್ಯಕ್ಷ ಉಸ್ತಾದ ಬಳಗಾನೂರ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹ೦ದಿಗೆ ಹೋಲಿಸಿ, ಚಂದ್ರಶೇಖರ್ ಈ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ. ಕರ್ನಾಟಕ ಬಿಜೆಪಿ ಕೂಡ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಬಿಜೆಪಿ ಆರೋಪಿಸಿದೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆಯುವ ನಂಬಿಕೆ ಇಲ್ಲ. ಸಿಬಿಐ ತನಿಖೆಯೇ ಆಗಬೇಕೆಂದು ಒತ್ತಾಯಿಸಲು ಬಿಜೆಪಿ ಮುಂದಾಗಿದೆ ಕೇಂದ್ರ ಸಚಿವರ ವಿರುದ್ಧವೇ ಲೋಕಾಯುಕ್ತ ಎಡಿಜಿಪಿ ಮಾತನಾಡುತ್ತಾರೆ ಎಂದರೆ ಮುಡಾ ಕೇಸ್ ತನಿಖೆಯಲ್ಲಿ ಪಾರದರ್ಶಕತೆ ನಿರೀಕ್ಷೆ ಇಲ್ಲ ಎಂದು ಸಿಬಿಐ ತನಿಖೆಗೆ ಆಗ್ರಹಿಸಲು ಬಿಜೆಪಿ ಮುಂದಾಗಿದೆ. ಏತನ್ಮಧ್ಯೆ, ಡಿಸಿಎಂ ಡಿಕೆ ಶಿವಕುಮಾರ್ ನಮಗೂ ಇದಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಇತರ ಕಾಂಗ್ರೆಸ್ ನಾಯಕರು ಎಡಿಜಿಪಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಗೌರವಾನ್ವಿತ ರಾಜ್ಯ ಪಾಲರು ಲೋಕಾಯುಕ್ತ ಕಚೇರಿಯಲ್ಲಿ ತನಿಖೆಗೆ ಬಾಕಿ ಉಳಿದಿರುವ ಪ್ರಕರಣಗಳ ಬಗ್ಗೆ ಮಾಹಿತಿ ಮತ್ತು ವಿಚಾರಣೆ ವಿವರಗಳನ್ನು ಬಯಸಿದಾರೆ ಮತ್ತು ಈ ಸಂಗತಿ ಬಯಲಾಗಿದೆ, ರಾಜ್ಯ ಸರ್ಕಾರದಿಂದ ವಿವರಣೆ ಕೇಳಿದ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು, ಈ ಮಾಹಿತಿ ರಾಜಭವನದಿಂದ ಸೋರಿಕೆ ಆಗಿದೆ ಎನ್ನುವ ಆರೋಪವನ್ನು ಹೇರಿ ರಾಜ್ಯಪಾಲರ ಕಚೇರಿ ಮೇಲೆ ತನಿಖೆ ನಡೆಸುವ ದರ್ಪ ಮೆರೆದಿದ್ದ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಭ್ರಷ್ಠಾಚಾರ ನಿರ್ಮೂಲನೆ ಬಗ್ಗೆ ತನಿಖೆ ನಡೆಸುವ ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲ ಸುಲಿಗೆಕೋರ ಮತ್ತು ಭ್ರಷ್ಠ್ಟ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಈ ಹಿನ್ನೆಲೆಯಲ್ಲಿ ನಮ್ಮ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ರವರ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಎಂ. ಚಂದ್ರಶೇಖರ್ ರವರು ಎಸ್.ಐ.ಟಿ ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ಹಚ್.ಡಿ.ಕುಮಾರಸ್ವಾಮಿ ಯವರ ವಿರುದ್ಧ ಅಗ್ಗದ ಮತ್ತು ಅವಾಚ್ಯ, ಶಬ್ದಗಳನ್ನು ಬಳಸಿದ್ದಾರೆ. ಅದರಿಂದ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ ರವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

- Advertisement -

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಪ್ರಕಾಶ ಹಿರೇಕುರಬರ, ಉಸ್ತಾದ ಬಳಗಾನೂರ, ಭೀಮು ರತ್ನಾಕರ, ನಾನಗೌಡ ಡವಳಾರ, ರವಿ ಭೋವಿ ಸೇರಿದಂತೆ ಅನೇಕರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಮುದ್ರ ವಿಹಾರ ತಂದಿತು ಜೀವಕ್ಕೆ ಕುತ್ತು; ನೋಡನೋಡುತ್ತಲೇ ಮುಳುಗಿದ ಬೋಟ್

ಗೋವಾದಂಥ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ಕೊಟ್ಟಾಗ ಅಲ್ಲಿನ ಸಮುದ್ರದಲ್ಲಿ ವಿಹಾರ ಮಾಡುವುದು ಅತ್ಯಂತ ಹೆಚ್ಚಿನ ಬೇಡಿಕೆಯಾಗಿರುತ್ತದೆ. ಹಾಗೆಯೇ ಗೋವಾದಲ್ಲಿ ನಡೆದಿದೆಯೆಂದು ಹೇಳಲಾದ ಬೋಟ್ ಪಯಣ ಅದರ...
- Advertisement -

More Articles Like This

- Advertisement -
close
error: Content is protected !!
Join WhatsApp Group