ಸಿಂದಗಿ: ರಾಜ್ಯ ವಿಧಾನ ಸಭಾ ಚುನಾವಣಾ ನಿಮಿತ್ತವಾಗಿ ವಿಜಯಪುರ ರಸ್ತೆಯಲ್ಲಿರುವ ಪಟ್ಟಣದ ಮಾಂಗಲ್ಯ ಭವನದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ ಕಾರಣ ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿವಂತೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪತ್ರಿಕಾ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ಇಂದು ಏ 29 ರಂದು ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಗುತ್ತಿದ್ದು ಈ ಸಭೆಯಲ್ಲಿ ಚುನಾವಣಾ ಪ್ರಚಾರದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಬೇಕು ಮತ್ತು ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಪ್ರಚಾರ ಸಮಿತಿ ಅಧ್ಯಕ್ಷರಾದ ಎಮ್ ಬಿ ಪಾಟೀಲ, ಶಾಸಕರುಗಳಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕರಾದ ಅಪ್ಪಾಜಿ ನಾಡಗೌಡ, ಜಿಲ್ಲಾ ಅಧ್ಯಕ್ಷ ರಾಜು ಆಲಗೂರ, ಹಾಗೂ ಇತರ ಮುಖಂಡರು ಆಗಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.