ಸೈಕಲ್‌ ಜಾಥಾದಲ್ಲಿ ಪಾಲ್ಗೊಳ್ಳಲು ಮನವಿ

Must Read

ಸಿಂದಗಿ: ಮತಕ್ಷೇತ್ರ್ರದಲ್ಲಿ ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ 7 ರಂದು ಸಿಂದಗಿ ನಗರದಲ್ಲಿ ಬೆಳಿಗ್ಗೆ 10:30 ಗಂಟೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನನಿತ್ಯ ಏರಿಸುತ್ತಿರುವುದರಿಂದ ಜನಸಾಮಾನ್ಯರಿಗೆ ತುಂಬಾ ಹೊರೆಯಾಗುತ್ತಿದ್ದು ತೈಲ ಬೆಲೆ ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಂದಗಿಯಲ್ಲಿ ಸೈಕಲ್ ಜಾಥಾ ರ್ಯಾಲಿಯನ್ನು ಕೆಪಿಸಿಸಿ ಆದೇಶದಂತೆ ಹಮ್ಮಿಕೊಳ್ಳಲಾಗಿದೆ.

ಆದಕಾರಣ ಈ ಕಾರ್ಯಕ್ರಮವನ್ನು ಸಿಂದಗಿ ಮತಕ್ಷೇತ್ರದ ಎಲ್ಲ ಕಾಂಗ್ರೆಸ್ ಮುಖಂಡರು ಹಾಗೂ ಅಂಗ ಘಟಕಗಳ ಪದಾಧಿಕಾರಿಗಳು ಮತ್ತು ಹಾಲಿ ಮತ್ತು ಮಾಜಿ ಚುನಾಯಿತ ಜನಪ್ರತಿನಿಧಿಗಳು ತಪ್ಪದೆ ಭಾಗವಹಿಸಬೇಕು ಎಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳೂರ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group