- Advertisement -
ಮೂಡಲಗಿ: ಬೆಳಗಾವಿಯ ಗಾಂಧಿ ಭವನದಲ್ಲಿ ಅ.8 ರಂದು ಮುಂಜಾನೆ 11 ಕ್ಕೆ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ನೇತೃತ್ವದಲ್ಲಿ ಹಾಗೂ ಸಂಸದರು, ಸಚಿವರು, ಶಾಸಕರು, ರಾಜಕೀಯ ಮುತ್ಸದ್ಧಿಗಳು, ವಿವಿಧ ಪ್ರಮುಖರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವೇದಿಕೆಯಿಂದ ಜರುಗುವ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಮೂಡಲಗಿ ತಾಲೂಕಿನ ಕಲ್ಲೋಳಿಯ ಮಂಜುಳಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.