ಖಾಸಗಿ ಶಾಲೆಗಳನ್ನು ಆರ್ಥಿಕ ಸಂಕಷ್ಠದಿಂದ ಪಾರು ಮಾಡಿ: ಮನವಿ

Must Read

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...

ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ...

ಮುಷ್ಕರ ಮತ್ತು ಆರ್ಥಿಕ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ವಿದ್ಯಮಾನಗಳಲ್ಲಿ ಮುಷ್ಕರ ಕೂಡ ಒಂದು. ಬಂದ್ ಬಂದ್ ಬಂದ್.ಏನಿದು?ಏಕೆ ಮಾಡಬೇಕು? ಇದರಿಂದ ಆಗುವ ಬದಲಾವಣೆಗಳೇನು? ಯಾರಿಗೆ ಲಾಭ?...

ಸವದತ್ತಿ: ಗ್ರಾಮೀಣ ಪ್ರದೇಶದಲ್ಲಿ ಬಡವರ ಹಾಗೂ ನಿರ್ಗತಿಕ ಕುಟುಂಬಗಳ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕನ್ನಡ ಮಾಧ್ಯಮದ ಖಾಸಗಿ ಶಾಲೆಗಳು ಇದೀಗ ಆರ್ಥಿಕವಾಗಿ ಸಂಕಷ್ಠ ಅನುಭವಿಸುತ್ತಿವೆ. ಈ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕೆಂದು ಸಂಘದ ಅಧ್ಯಕ್ಷ ಜಗದೀಶ ತೋಟಗಿ ಹೇಳಿದರು.

ಸ್ಥಳೀಯ ಪ್ರವಾಸಿ ಮಂದಿರಕ್ಕೆ ಮಂಗಳವಾರ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಅವರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನರಹಿತ ಶಾಲೆಗಳ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಿದ ವೇಳೆ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದ ಸದ್ಯ ಎಲ್ಲ ರಂಗಗಳು ಸಂಕಷ್ಟ ಅನುಭವಿಸುತ್ತಿವೆ. ಅದರಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಹೊರತಾಗಿಲ್ಲ. 2 ಅವಧಿ ಶೈಕ್ಷಣಿಕ ವರ್ಷಗಳಲ್ಲಿ ಶಾಲಾ ಸಿಬ್ಬಂದಿಗಳಿಗೆ ವೇತನ ಭರಿಸದಂಥ ಸ್ಥಿತಿ ಇದೆ. ಕಾರಣ ತಾವುಗಳು ನಮ್ಮ ಮನವಿ ಪರಿಗಣಿಸಿ ಸರಕಾರದ ಮೇಲೆ ಒತ್ತಡ ತಂದು ಕನ್ನಡ ಶಾಲೆ ಹಾಗೂ ಕನ್ನಡ ಭಾಷೆಯ ಉಳಿವಿಗೆ ಪ್ರಾಶಸ್ತ್ಯ ನೀಡಬೇಕು.

- Advertisement -

ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸದೇ 2 ದಶಕಗಳೇ ಗತಿಸಿದ್ದು, ಅನುದಾನರಹಿತ ಶಾಲೆಗಳೆಂಬ ಹಣೆಪಟ್ಟಿ ಶಾಶ್ವತವಾಗಿ ಉಳಿಯಬಾರದು. ಇತ್ತೀಚಿನ ಅನೇಕ ಸರಕಾರಗಳಿಗೆ ಈ ಕುರಿತು ಮನವಿ ಮಾಡಿದರೂ ಯಾವುದೇ ಪರಿಣಾಮವಾಗಿಲ್ಲ. ಆದರೆ ಕಳೆದ ಸರಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶಕುಮಾರ ಅನುದಾನಕ್ಕೆ ಒಳಪಡಿಸುವ ಇಂಗಿತ ವ್ಯಕ್ತ ಪಡಿಸಿದ್ದರು. ಆದ್ದರಿಂದ 1995 ರ ನಂತರದ ಅನುದಾನರಹಿತ ಕನ್ನಡ ಮಾಧ್ಯಮದ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿರಿ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಅವರು, “ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿ ಬಗ್ಗೆ ಅರಿವಿದೆ. ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಚಿಂತನೆಯಲ್ಲಿ ಯಡಿಯೂರಪ್ಪನವರ ಸರಕಾರ ಅಂತಿಮ ಹಂತ ತಲುಪಿತ್ತು. ಬಳಿಕ ಸರಕಾರ ಬದಲಾವಣೆಗೊಂಡು ಹೊಸ ಶಿಕ್ಷಣ ಮಂತ್ರಿಗಳಿಗೆ ಈ ಕುರಿತು ಮನದಟ್ಟು ಮಾಡಲಾಗುವದು.” ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ ಅವರು, ಕೋವಿಡ್ 3ನೇ ಅಲೆ ಬರದೇ ಶಾಲೆಗಳು ಸುರಕ್ಷಿತವಾಗಿ ನಡೆದು ಎಂದಿನಂತೆ ಮಕ್ಕಳು ಭೌತಿಕ ತರಗತಿಗಳಿಗೆ ಹಾಜರಾಗುವಂತೆ ಆಶಿಸುತ್ತೇನೆ ಎಂದರು

ಈ ವೇಳೆ ಚಿದಂಬರ ಮಠದ, ಪ್ರಸನ್ ದಿಕ್ಷೀತ್, ಬಸಪ್ಪ ಜೋಗಿಹಳ್ಳಿ, ರಮೇಶ ದೇವರಡ್ಡಿ, ಬಿ.ಎಸ್.ಪುಟ್ಟಿ, ಎಸ್.ಎಮ್.ವಾರೆಪ್ಪನವರ, ಡಿ.ಎಸ್.ಕೊಪ್ಪದ, ಎಮ್.ಎಸ್. ಕಲಾಲ, ಮಹಾಂತೇಶ ಕೊಟ್ಟರಶೆಟ್ಟಿ, ನಾಗರತ್ನ ಮಠ, ಅಂಗಡಿ, ಆನಂದ ಹಿರೆಹೊಳಿ, ಸೋಮೇಶ ಕಂಕಣವಾಡಿ, ಬಸವರಾಜ ತಳವಾರ ಸೇರಿದಂತೆ ಇತರರು ಇದ್ದರು.

- Advertisement -
- Advertisement -

Latest News

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...
- Advertisement -

More Articles Like This

- Advertisement -
close
error: Content is protected !!